ಕೋಲಾರ

ಕ್ಯಾರಿ ಓವರ್ ಪದ್ಧತಿ ಮುಂದುವರೆಯಲಿ

Published On :

ಕೆಜಿಎಫ್: ಡಿಪ್ಲೊಮೋ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಮುಂದುವರಿಸುವಂತೆ ಒತ್ತಾಯಿಸಿ ದಲಿತ ಸಿಂಹ ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಬಿ.ಆರ್.ಅಂಬೇಡ್ಕರ್ ಉದ್ಯಾನವನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಸೂರಜ್‌ಮುಲ್ ವೃತ್ತ, ಗೀತಾ ರಸ್ತೆ ಮೂಲಕ ನಾಡ ಕಚೇರಿ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸೂಲಿಕುಂಟೆ ಆನಂದ್ ಮಾತನಾಡಿ, ರಾಜ್ಯದಲ್ಲಿ ಡಿಪ್ಲೊಮೋ ವಿದ್ಯಾರ್ಥಿಗಳಿಗಾಗಿ ಮೊದಲಿನಿಂದಲೂ ಕ್ಯಾರಿ ಓವರ್ ಪದ್ಧತಿ ಅನುಸರಿಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ದಿಢೀರನೆ ಕ್ಯಾರಿ  ಓವರ್ ಪದ್ಧತಿ ರದ್ದುಗೊಳಿಸಿದ್ದು, ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಇತರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದರು.
ಗ್ರಾಮೀಣ ಅಭ್ಯರ್ಥಿಗಳಿಗೆ ತೊಂದರೆ: ಗ್ರಾಮೀಣ ಪ್ರದೇಶಗಳಿಂದ ಕನ್ನಡ ಕಲಿತು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಇದು ಮಾರಕವಾಗಿರುತ್ತದೆ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಈ ಅನುಮೋದನೆಯಿಂದ ವಿದ್ಯಾರ್ಥಿ ವಿರೋಧಿ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುವ ಜೊತೆಗೆ ಅವರ ಮುಂದಿನ ಭವಿಷ್ಯವನ್ನು ಹಾಳು ಮಾಡುವಂತಾಗುತ್ತದೆ ಎಂದರು.
ಶಾಸಕರಿಗೆ ಮನವಿ ಪತ್ರ: ಈ ನಿಟ್ಟಿನಲ್ಲಿ ಕೆಜಿಎಫ್ ಶಾಸಕಿ ವೈ.ರಾಮಕ್ಕ ಸೇರಿದಂತೆ ಕೋಲಾರ ಜಿಲ್ಲೆಯ ಎಲ್ಲಾ ಶಾಸಕರೂ ರಾಜ್ಯ ಸರ್ಕಾರ ಈ ಹಿಂದಿನಂತೆ ಕ್ಯಾರಿ ಓವರ್ ಪದ್ಧತಿ ಮುಂದುವರೆಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿ ಕೆಜಿಎಫ್ ಶಾಸಕಿ ವೈ.ರಾಮಕ್ಕ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸರ್ಕಾರದ ಗಮನಕ್ಕೆ ತರುವೆ: ಶಾಸಕಿ ವೈ.ರಾಮಕ್ಕ ಮಾತನಾಡಿ, ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳಿಗೆ ಶಾಸಕರಾಗಿ ಅವರೊಂದಿಗೆ ಕೈಜೋಡಿಸಲು ಸದಾ ಸಿದ್ದರಿದ್ದು ತಮ್ಮ ಮನವಿಯನ್ನು ಆಲಿಸಿ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿಲ್ಲಾ ಕಾರ್ಯದರ್ಶಿ ಹನುಮಪ್ಪ,ರಮೇಶ್, ಕೆಜಿಎಫ್ ಘಟಕದ ಅಧ್ಯಕ್ಷ ಕುಮರನ್, ಮುನಿಸ್ವಾಮಿ, ಗೋವಿಂದ, ಪಿಲ್ಲಪ್ಪ ಸೇರಿದಂತೆ ಕಾರ್ಯಕರ್ತರು, ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪತ್ರಕರ್ತರಿಗೆ ನಿವೇಶನಕ್ಕೆ ಪ್ರಯತ್ನ: ಸುಬ್ಬಾರೆಡ್ಡಿ
ಬಾಗೇಪಲ್ಲಿ: ಕಾರ್ಯ ನಿರತ ಪತ್ರಕರ್ತರಿಗೆ ಸರ್ಕಾರದ ವತಿಯಿಂದ ನಿವೇಶನಗಳನ್ನು ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭರವಸೆ ನೀಡಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಬಾಗೇಪಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಸಸಿ ನಡೆವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಪತ್ರಕರ್ತರ ಪಾತ್ರ ತುಂಬಾ ಮಹತ್ವದ್ದು, ಪತ್ರಕರ್ತರು ಹಗಲು ರಾತ್ರಿ ಎನ್ನದೆ ಸುದ್ದಿಗಳನ್ನು ಹಿಂಬಾಲಿಕೊಂಡು ಹೋಗುತ್ತಾರೆ. ಈ ನಿಟ್ಟಿನಲ್ಲಿ ಅನರಿಗೆ ರಕ್ಷಣೆ ಇರುವುದಿಲ್ಲ. ಅನೇಕ ಪತ್ರಕರ್ತರು ತಮ್ಮ ಕುಟುಂಬಗಳ ನಿರ್ವಹಣೆಗೆ ತೊಂದರೆ ಅನುಭವಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಸರ್ಕಾರ ಪತ್ರಕರ್ತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಜಯರಾಮ್ ಮಾತನಾಡಿದರು.ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್.ನರಸಿಂಹನಾಯ್ಡು,  ತಾ.ಕಾ.ನಿ.ಪ. ಸಂಘದ ಅಧ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ ಮತ್ತಿತರರು ಮಾತನಾಡಿದರು. ಪತ್ರಕರ್ತರ ಕ್ರೀಡಾ ಕೂಟದಲ್ಲಿ ವಿಜೇತರಾದ ಪತ್ರಕರ್ತರಿಗೆ ಪುರಸಭೆ ಮುಖ್ಯಾಧಿಕಾರಿ ಆರ್.ಶ್ರೀಕಾಂತ್‌ಬಹುಮಾನ ವಿತರಿಸಿದರು. ಶ್ರೀನಿವಾಸ್, ವೃತ್ತ ನಿರೀಕ್ಷಕ ಶ್ರೀನಿವಾಸ ಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.