ನಕಲಿ ಕೀಟ ನಾಶಕ ಹಾವಳಿ: ಕ್ರಮಕ್ಕೆ ಆಗ್ರಹ
ಕೋಲಾರ: ನಕಲಿ ಕೀಟನಾಶಕ ಮಾರಾಟಗಾರರನ್ನು ಶಿಕ್ಷಿಸಲು ವಿಫಲರಾಗಿರುವ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘದ ಮುಖಂಡರು ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಪ್ರಕರಣ ಮುಚ್ಚಿ ಹಾಕುವ ಯತ್ನ: ನಕಲಿ ಕೀಟನಾಶಕ ಮಾರಾಟಗಾರರನ್ನು ನಾವೇ ಖುದ್ದಾಗಿ ಕೃಷಿ ಅಧಿಕಾರಿಗಳಿಗೆ ಹಿಡಿದುಕೊಟ್ಟರೂ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಮುಖಂಡರು ದೂರಿದರು.ಮನವಿ ಸಲ್ಲಿಸುವಾಗ ರೈತ ಸಂಘದ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ನಾರಾಯಣಗೌಡ, ಹಸಿರು ಸೇನೆ ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್, ಮುಖಂಡರಾದ ಹೂಹಳ್ಳಿ ನಾಗರಾಜ್, ಬಂಗವಾದಿ ನಾಗರಾಜ ಗೌಡ, ಮೂರಾಂಡಹಳ್ಳಿ ಶಿವಾರೆಡ್ಡಿ ಮತ್ತಿತರರು ಇದ್ದರು.
'ಬೆಸ್ಕಾಂ ಅಧಿಕಾರಿಗಳು ಇತ್ತ ಗಮನ ಹರಿಸಲಿ'
ಮಾಲೂರು: ತಾಲೂಕಿನ ಬ್ಯಾಟರಾಯನಪುರದ ಅಂಗನವಾಡಿ ಹಾಗೂ ಸರ್ಕಾರಿ ಶಾಲೆಯ ಮಧ್ಯದಲ್ಲಿರುವ ವಿದ್ಯುತ್ ಕಂಬ ಮುರಿದು ಬೀಳುವ ಹಂತದಲ್ಲಿದ್ದು, ಬೆಸ್ಕಾಂ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಶಾಲಾ ಶಿಕ್ಷಕರು ಅಗ್ರಹಿಸಿದ್ದಾರೆ.ಆಷಾಢ ಗಾಳಿ ಬೀಸುತ್ತಿರುವ ಈ ಸಂದರ್ಭದಲ್ಲಿ ಯಾವುದೇ ಕ್ಷಣದಲ್ಲಿ ಈ ವಿದ್ಯುತ್ ಕಂಬ ಶಾಲೆ ಮೇಲೆ ಬೀಳುವ ಸಂಭವವಿದ್ದು, ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ನಿತ್ಯ ಆತಂಕ ಪಡುವಂತಾಗಿದೆ ಎಂದು ಶಾಲೆ ಶಿಕ್ಷಕರು ಹಾಗೂ ಗ್ರಾಮಸ್ಥರು ದೂರಿದ್ದಾರೆ.ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಈ ಬಗ್ಗೆ ಸ್ಥಳೀಯ ಕುಂತೂರು ಬೆಸ್ಕಾಂ ಸಬ್ ಸ್ಟೇಷನ್ನಲ್ಲಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎನ್ನುವ ಮಕ್ಕಳ ಪೋಷಕರು, ಶಿಕ್ಷಕರು ಅವಘಡ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತು ಕಂಬ ಬದಲಾಯಿಸಿ ಮಕ್ಕಳ ಪ್ರಾಣವನ್ನು ಕಾಪಾಡಿ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

