ಜೂಜು ತಡೆಗಟ್ಟಲು ನಾಗರಿಕರ ಮನವಿ
ಶ್ರೀನಿವಾಸಪುರ: ಪಟ್ಟಣದಲ್ಲಿ ಜೂಜುಕೋರರೊಂದಿಗೆ ಪೊಲೀಸರು ಶಾಮೀಲಾಗಿ ಗೊತ್ತಿದ್ದು ಗೊತ್ತಿಲ್ಲದವರಂತೆ ಪಟ್ಟಣದ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ನಾಗರಿಕರು ದೂರಿದ್ದಾರೆ.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಜೂಜುಕೋರರು ಸೇರಿಕೊಂಡು ಬೆಳಿಗ್ಗೆಯಿಂದ ರಾತ್ರಿವರೆಗೆ ಜೂಜಾಟದಲ್ಲಿ ನಿರತರಾಗಿ ಕುಡಿದ ಮತ್ತಿನಲ್ಲಿ ಒಬ್ಬರನ್ನೊಬ್ಬರು ಬೈಯ್ದು ಕೊಳ್ಳುತ್ತಿರುತ್ತಾರೆ ಇದರಿಂದ ಜೂಜು ಕಟ್ಟೆಯ ಅಕ್ಕ-ಪಕ್ಕಗಳಲ್ಲಿರುವ ಮನೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಬಹಳ ತೊಂದರೆಗಳಾಗಿದ್ದು ವಿದ್ಯಾರ್ಥಿಗಳ ಪೋಷಕರು ಯಾರಿಗೂ ಹೇಳಿಕೊಳ್ಳಲಾಗದೆ ನರಕಯಾತನೆ ಅನುಭವಿಸುತ್ತಾರೆ ಎಂಬ ಅರೋಪವಿದೆ. ಈ ಬಗ್ಗೆ ಪೊಲೀಸರ ಗಮನಕ್ಕೆ ತಂದಿದ್ದರೂ, ಪೊಲೀಸರು ಜೂಜಾಟಗಾರರೊಂದಿಗೆ ಶಾಮೀಲಾಗಿ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧ ಪಟ್ಟ ಮೇಲಾಧಿಕಾರಿಗಳು ಗಮನ ಹರಿಸಿ ಇಲ್ಲಿ ನಡೆಯುತ್ತಿರುವ ಜೂಜು ದಂಧೆಯ ನಿಗ್ರಹಕ್ಕೆ ಕಡಿವಾಣ ಹಾಕಬೇಕೆಂದು ನಾಗರಿಕರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
'ಪುರಸಭೆ ಮುಖ್ಯಾಧಿಕಾರಿ ಅಮಾನತು ಮಾಡಿ'
ಕ.ಪ್ರ.ವಾರ್ತೆ ಕೋಲಾರ ಆ.3
ಮುಳಬಾಗಲು ಪುರಸಭೆ ಮುಖ್ಯಾಧಿಕಾರಿ ಪಿ.ಅಶೋಕ್ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಪೌರ ಕಾರ್ಮಿಕರು ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪೌರಕಾರ್ಮಿಕರ ದಿನಾಚರಣೆಗೆ ವಿಶೇಷವಾಗಿ ಸರ್ಕಾರ ತಲಾ 2 ಸಾವಿರ ರು.ಗಳನ್ನು ಬಿಡುಗಡೆ ಮಾಡಿದೆ. ಆದರೆ ಈ ಹಣವನ್ನು ನೀಡಲು ಪುರಸಭೆಯ ಮುಖ್ಯಾಧಿಕಾರಿ ಪೌರಕಾರ್ಮಿಕರಿಂದ ತಲಾ 200 ರು. ಲಂಚ ಕೇಳಿದ್ದಾರೆಂದು ಕಾರ್ಮಿಕರು ಮನವಿಯಲ್ಲಿ ಆರೋಪಿಸಿದ್ದಾರೆ.
ಪೌರಾ ಕಾರ್ಮಿಕರು ಲಂಚ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ವಿಶೇಷ ಧನಸಹಾಯವನ್ನು ತಡೆಹಿಡಿದಿದ್ದರು.
ಈ ಬಗ್ಗೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತಂದ ಮೇಲೆ ಹಣವನ್ನು ಬಿಡುಗಡೆ ಮಾಡಿರುವುದರಿಂದ ಮುಖ್ಯಾಧಿಕಾರಿಯು ನಮ್ಮ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೊಂದರೆ ನೀಡುತ್ತಿದ್ದು, ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯ ಹೆಡ್ ಮುನ್ಷಿ ಕೃಷ್ಣೇಗೌಡರಿಗೆ ಮನವಿ ನೀಡಿ ಜಿಲ್ಲಾಧಿಕಾರಿಗಳಿಗೆ ತಲುಪಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಪೌರಕಾರ್ಮಿಕರಾದ ಶ್ರೀನಿವಾಸ್, ರಾಮಚಂದ್ರ, ಮುನಿಯಪ್ಪ, ಪ್ರದೀಪ್ಕುಮಾರ್, ನಾರಾಯಣಸ್ವಾಮಿ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

