'ನೌಕರರ ಸಮಸ್ಯೆಗೆ ಸ್ಪಂದನೆ'
ಚಿಂತಾಮಣಿ: ಎಲ್ಲ ಇಲಾಖೆಯ ಸರ್ಕಾರಿ ನೌಕರರ ಹಿತರಕ್ಷಣೆಗಾಗಿ ದುಡಿಯುತ್ತಾ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಹಿತ ಕಾಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆಂದು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ ಹೇಳಿದರು.
ರವರು ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಶನಿವಾರ ನಡೆದ 2013-14ನೇ ಸಾಲಿನ ಶೈಕ್ಷಣಿಕ ಕಾರ್ಯಾಗಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಆರ್.ವೆಂಕಟರಮಣರೆಡ್ಡಿ ಮಾತನಾಡಿ, ಸಂಘ ಇನ್ನೂ ಬಲಗೊಳ್ಳಲು ಸಂಘಕ್ಕೆ ಪ್ರಾಮಾಣಿಕ ಸದಸ್ಯತ್ವ ಅಗತ್ಯ. ಆ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಶಿಕ್ಷಕರು ಬೇಧಭಾವ ಮರೆತು ಸಂಘದ ಸಕ್ರಿಯ ಸದಸ್ಯರಾಗುವಂತೆ ಕೋರಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಹೆಚ್.ಮಂಜುನಾಥ್ ಮಾತನಾಡಿ, ಸೌಹಾರ್ದ ವಾತಾವರಣ ನಿರ್ಮಾಣ ಮಾಡುವುದರ ಜೊತೆ ಎಲ್ಲ ಶಿಕ್ಷಕರನ್ನು ವಿಶ್ವಾಸದಲ್ಲಿಟ್ಟುಕೊಂಡು ಸಂಘಕ್ಕೆ ಎಲ್ಲ ಶಿಕ್ಷಕರ ಸದಸ್ಯತ್ವ ಮಾಡಿಸುತ್ತೇನೆ ಎಂದರು.
ಸಂಘದ ಕಾರ್ಯದರ್ಶಿ ಮಂಜುನಾಥ್, ಖಜಾಂಚಿಗಳಾದ ಲಕ್ಷ್ಮಿನಾರಾಯಣ್, ದೊಡ್ಡಗಂಜೂರು ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಧರ್ಬಾಬು, ಜಿಲ್ಲಾ ಸಂಘದ ಸಹ ಕಾರ್ಯದರ್ಶಿ ಸಿ.ಓಂಕಾರಪ್ಪ, ಎಂ.ರಾಜಣ್ಣ, ಪದಾಧಿಕಾರಿಗಳಾದ ಲೋಕೇಶ್, ಮಲ್ಲಿ, ವಿಶ್ವನಾಥ್, ಬಾಹುಬಲಿ, ಸಿ.ವೆಂಣಕಟರವಣಪ್ಪ, ನಿರಂಜನ್ಬಾಬು, ಶಿಕ್ಷಕಿ ಚಂದ್ರಕಲಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

