ಕೋಲಾರ

ಖೋ ಖೋ ರೆಫರಿ ಪರೀಕ್ಷೆಗೆ ಚಾಲನೆ

Published On :

ಕೋಲಾರ: ಕ್ರೀಡಾಧಿಕಾರಿಗಳು ನ್ಯಾಯಾಧೀಶರಿದ್ದಂತೆ. ಕ್ರೀಡಾ ನಿಯಮಗಳನ್ನು ಸರಿಯಾಗಿ ಪಾಲಿಸಿ ಸ್ಪರ್ಧೆಗಳಲ್ಲಿ ಯಾರಿಗೂ ಅನ್ಯಾಯವಾಗದಂತೆ ಹಾಗೂ ನಿಸ್ಪಕ್ಷಪಾತ ತೀರ್ಪು ನೀಡುವ ಮೂಲಕ ಕ್ರೀಡಾ ಕ್ಷೇತ್ರದ ಘನತೆ ಕಾಪಾಡಬೇಕೆಂದು ಕರ್ನಾಟಕ ಖೋ ಖೋ ಸಂಸ್ಥೆ ಸಹ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಅವರು ದೈಹಿಕ ಶಿಕ್ಷಣ ಶಿಕ್ಷಕಿಗೆ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಖೋ ಖೋ ಸಂಸ್ಥೆ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಖೋ ಖೋ ರೆಫರಿ ಪರೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಆಟದ ನಿಯಮಗಳನ್ನು ತಿಳಿಯದಿದ್ದರೆ ರೆಫರಿಗಳಾಗಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗದೆ ನಿಂದನೆಗೆ ತುತ್ತಾಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಚಿಲಕಾಂತ್‌ಮಠ್ ಮಾತನಾಡಿ, ಬಹು ದಿನಗಳಿಂದ ಖೋ ಖೋ ರೆಫರಿಗಳಿಗೆ ಪರೀಕ್ಷೆ ನಡೆಸಬೇಕೆಂಬ ಆಸೆ ಈಡೇರಿಸಿದೆ. ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ಅನುಮಾನಗಳನ್ನು ನಿವಾರಣೆ ಮಾಡಿಕೊಳ್ಳುವುದಕ್ಕೂ ಇದೊಂದು ಉತ್ತಮ ಅವಕಾಶವಾಗಿದೆ. ಇದರಿಂದ ಆಸಕ್ತಿಯಿಂದ ತರಬೇತಿ ಮತ್ತು ಪರೀಕ್ಷೆಯಲ್ಲಿ ಭಾಗವಹಿಸಿ ಎಂದರು.
ಕರ್ನಾಟಕ ಖೋ ಖೋ ಸಂಸ್ಥೆ ಅಧ್ಯಕ್ಷ ಕೆ.ಎಸ್. ಮುಕುಂದ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ ಗೌಡ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಆರ್.ನಾರಾಯಣಸ್ವಾಮಿ, ಕೋಲಾರ ಖೋ ಖೋ ಸಂಘದ ಅಧ್ಯಕ್ಷ ಬಿ.ಸುರೇಶ್ ಗೌಡ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮುಕುಂದ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ನಾಗರಾಜ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಚೌಡಪ್ಪ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ವಿ.ಮುರಳಿ ಮೋಹನ್ ವಂದಿಸಿದರು.

ಜಿಲ್ಲಾ ಆಸ್ಪತ್ರೆಗೆ ಸೌಕರ್ಯಕ್ಕೆ ಆಗ್ರಹ
ಕೋಲಾರ: ನಗರದ ಜಿಲ್ಲಾ ಎಸ್‌ಎನ್‌ಆರ್ ಆಸ್ಪತ್ರೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಆತ್ಮ ವಿಶ್ವಾಸ ವೇದಿಕೆಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಶನಿವಾರ ವೇದಿಕೆಯ ಮುಖಂಡರ ನಿಯೋಗ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಚೇರಿಯ ಹೆಡ್ ಮುನ್ಷಿ ಅವರಿಗೆ ಮನವಿ ಪತ್ರ ಸಲ್ಲಿಸಿ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಸಮರ್ಪಕವಾಗಿ ನೀಡುತ್ತಿಲ್ಲ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಸರಿಯಿಲ್ಲವೆಂದು ದೂರಿದೆ.  ಸರ್ಕಾರ ರೋಗಿಗಳ ಅನುಕೂಲಕ್ಕಾಗಿ ಕೋಟಿಗಟ್ಟಲೆ ಹಣ ಬಿಡುಗಡೆ ಮಾಡಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲವಾದ್ದರಿಂದ ಜಿಲ್ಲಾ ಆಡಳಿತ ಮಧ್ಯ ಪ್ರವೇಶ ಮಾಡಿ ಕೂಡಲೇ ಆಸ್ಪತ್ರೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಸೀಸಂದ್ರ ಎಂ.ಎನ್.ಭಾರದ್ವಾಜ್, ಬೇತಮಂಗಲ ರಮೇಶ್, ಕದಿರೇನಹಳ್ಳಿ ಕುಮಾರ್, ವೆಂಕಟೇಶ್, ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಸುದರ್ಶನ್, ನಯಾಜ್ ಅಹಮದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.