ಕ್ರಷರ್ಗಳಲ್ಲಿ ಅಪಾಯಕಾರಿ ಸ್ಫೋಟ ಬಳಕೆ ಆರೋಪ
ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಧನಮಟ್ನಹಳ್ಳಿ ಗ್ರಾಮದ ಬಳಿಯಿರುವ ಪ್ರಶಾಂತ್ ಜಲ್ಲಿ ಕ್ರಷರ್ನಲ್ಲಿ ಕಲ್ಲು ಬಂಡೆಗಳನ್ನು ಸಿಡಿಸಲು ಅಪಾಯಕಾರಿ ಸ್ಫೋಟಕಗಳನ್ನು ಬಳಕೆ ಮಾಡುತ್ತಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಆತಂಕ ಉಂಟಾಗಿರುವುದರಿಂದ ಕೂಡಲೇ ಜೆಲ್ಲಿ ಕ್ರಷರ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಮತ್ತು ರೈತ ಸಂಘದ ಮುಖಂಡರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಅತಿ ಹೆಚ್ಚು ಶಬ್ದ ಮಾಡುವ ಹಾಗೂ ಅಪಾಯಕಾರಿ ಸ್ಫೋಟಕಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ಈಗಾಗಲೇ ಅನೇಕ ಸಾರಿ ದೂರುಗಳು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಸ್ಫೋಟಕಗಳಿಂದಾಗಿ ಮನೆ ಗೋಡೆಗಳು ಬಿರುಕು ಬಿಟ್ಟಿವೆ. ಜನತೆ ತಮ್ಮ ಪ್ರಾಣ ರಕ್ಷಣೆಗಾಗಿ ಪರದಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಜೆಲ್ಲಿ ಕ್ರಷರ್ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ರೈತ ಸಂಘದ ಮುಖಂಡರಾದ ಶ್ರೀನಿವಾಸಗೌಡ, ಮೂರಂಡಹಳ್ಳಿ ಶಿವಾರೆಡ್ಡಿ, ಧನಮಟ್ನಹಳ್ಳಿ ಗೋಪಾಲ್, ಕೆಂಬೋಡಿ ಕೃಷ್ಣೇಗೌಡ, ನಟರಾಜ, ನಾಗೇಶ್, ಎಚ್.ರಮೇಶ್, ಆನಂದ್, ಮಂಜುನಾಥ್, ಸುರೇಶ್, ನಾರಾಯಣಸ್ವಾಮಿ, ಮುನಿನಾರಾಯಣ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

