ಕೋಲಾರ

ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ: 'ಹೈ' ನೋಟಿಸ್

Published On :

ಬೆಂಗಳೂರು: ಕೋಲಾರ ಜಿಲ್ಲೆ ಮಾಲೂರಿನಲ್ಲಿ ಹೆಚ್ಚಿರುವ ಕಲ್ಲು ಗಣಿಗಾರಿಕೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.  ಮಂಜುನಾಥ್. ಆರ್ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಎಲ್.ಮಂಜುನಾಥ್ ಹಾಗೂ ನ್ಯಾ.ರವಿಮಳಿಮಠ್ ಅವರಿದ್ದ ವಿಭಾಗೀಯ ಪೀಠ, ವಿಚಾರಣೆಯನ್ನು ಮುಂದೂಡಿದೆ. ಮಾಲೂರಿನಲ್ಲಿ 36ಕ್ಕೂ ಹೆಚ್ಚು ಕಲ್ಲು ಗಣಿಗಾರಿಕೆ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಪರಿಸರಕ್ಕೆ ತೀವ್ರ ಹಾನಿ ಉಂಟಾಗುತ್ತಿದೆ. ಈ ಸಂಬಂಧ ಮಾಹಿತಿ ಹಕ್ಕು ಕಾಯ್ದೆಯಿಂದ ದೊರೆತಿರುವ ಮಾಹಿತಿ ಪ್ರಕಾರ, ಇದರಲ್ಲಿ ಅನೇಕ ಗಣಿ ಸಂಸ್ಥೆಗಳ ಪರವಾನಗಿ ರದ್ದಾಗಿದೆ. ಆದರೂ, ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದನ್ನು ತಡೆಯಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಒಕ್ಕಲಿಗ ಹಿತರಕ್ಷಣಾ ವೇದಿಕೆ ಸ್ಥಾಪಿಸಲು ನಿರ್ಧಾರ
ಚಿಂತಾಮಣಿ: ತಾಲೂಕಿನಾದ್ಯಂತ ಒಕ್ಕಲಿಗರ ಕಷ್ಟ ಸುಖಗಳಿಗೆ ಮತ್ತು ಸಂಘಟನೆಯ ದೃಷ್ಟಿಯಿಂದ ತಾಲೂಕು ಒಕ್ಕಲಿಗ ಹಿತರಕ್ಷಣಾ ವೇದಿಕೆ ಸ್ಥಾಪಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿ ಜಾತಿಯ ಬಗ್ಗೆ ಬರುವ ತಪ್ಪು ಕಲ್ಪನೆಗಳನ್ನು ದೂರ ಮಾಡಲು ಸಮುದಾಯದ ಜನತೆ ಸಂಘಟಿತರಾಗಬೇಕು ಎಂದರು. ಆ.11ರಂದು ಬೆಳಿಗ್ಗೆ 11 ಗಂಟೆಗೆ ಪ್ರತಿ ಹಳ್ಳಿಯಿಂದಲೂ 5 ಜನರಂತೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಬೇಕೆಂದು ಕೋರಿದ್ದಾರೆ.
ಇಮ್ರಾನ್ ಆಯ್ಕೆ
ಚಿಂತಾಮಣಿ: ಕರ್ನಾಟಕ ಮುಸ್ಲಿಂ ಹಿತರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಇಮ್ರಾನ್ ಪಾಷಾ ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ಅಬ್ದುಲ್ ವಾಜಿದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯದರ್ಶಿಯಾಗಿ ಎಸ್.ಶಫಿವುಲ್ಲಾ, ಉಪಾಧ್ಯಕ್ಷರಾಗಿ ಡಾ.ಶಬೀರ್, ಉಪಕಾರ್ಯದರ್ಶಿಯಾಗಿ ಶಮಿಉಲ್ಲಾ, ಖಜಾಂಚಿಯಾಗಿ ಜಾಕಿರ್ ಉಸೇನ್, ನಿರ್ದೇಶಕರಾಗಿ ನಯಾಜ್ ಪಾಷಾ, ಪತ್ರಿಕಾ ಕಾರ್ಯದರ್ಶಿಯಾಗಿ ಮೊಹಮದ್ ಅಸ್ಲಂ ಪಾಷಾ ಆಯ್ಕೆಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.