ಶಾಸಕರೊಂದಿಗೆ ಸಂವಾದ ಕಾರ್ಯಕ್ರಮ
ಕೋಲಾರ: ಈಚೆಗೆ ತಾನೇ ಮುಕ್ತಾಯವಾದ ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಜಿಲ್ಲೆಯ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಜಿಲ್ಲೆಯ ಸಮಸ್ಯೆ ಮತ್ತು ಆಗುಹೋಗುಗಳ ಕುರಿತು ಚರ್ಚೆ ನಡೆಸಿರುವುದು ಮತ್ತು ಅವುಗಳ ಅನುಷ್ಠಾನದ ಕುರಿತು ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಳ್ಳಲಾಗಿದೆ.
ನಗರದ ಪತ್ರಕರ್ತರ ಭವನದಲ್ಲಿ ಆ.6 ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಸದನದಲ್ಲಿ ನಮ್ಮವರು ಸಂವಾದ ಕಾರ್ಯಕ್ರಮ ಏರ್ಪಡಿಸಿದೆ ಎಂದು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಗಣೇಶ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರಾವಣ ಪ್ರಯುಕ್ತ ವಿಶೇಷ ಪೂಜೆ
ಮಾಲೂರು: ತಾಲೂಕಿನ ಚಿಕ್ಕತಿರುಪತಿ ಗ್ರಾಮದ ಹೆಸರಾಂತ ಪುಣ್ಯಕ್ಷೇತ್ರ ಶ್ರೀಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಬುಧವಾರದಿಂದ 1 ತಿಂಗಳ ಕಾಲ ಶ್ರಾವಣ ಮಾಸದ ಪ್ರಯುಕ್ತ ವಿಶೇಷ ಪೂಜೆಗಳು ನಡೆಯಲಿದೆ.
ಆ.7ರಿಂದ ಶ್ರಾವಣ ಮಾಸದಲ್ಲಿ ಬರುವ 4 ಶನಿವಾರಗಳಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಪೂಜಾದಿ ಕಾರ್ಯಕ್ರಮಗಳು ನಡೆಯಲಿವೆ, ಶ್ರಾವಣ ಶನಿವಾರ ನಡೆಯಲಿರುವ ಈ ಮಹೋತ್ಸವಕ್ಕೆ ಆಗಮಿಸಲಿರುವ ಲಕ್ಷಾಂತರ ಭಕ್ತರು ಉತ್ತಮ ಸಾರಿಗೆ ಸೌಲಭ್ಯ, ಕುಡಿಯುವ ನೀರು, ಮುಡಿ ಕೊಡುವ ಭಕ್ತರಿಗೆ ಸ್ನಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಶನಿವಾರ ಬೆಳಿಗ್ಗೆ ನಾದಸ್ವರ ಕಚೇರಿ, ಭಜನೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರು ಪಾಲ್ಗೊಳ್ಳುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸೋಮಶೇಖರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

