ಕುಪ್ಪಹಳ್ಳಿ ಸಮೀಪ ಕಾರು ಉರುಳಿ ಭಸ್ಮ ಬೆಂಗಳೂರಿನ ಯುವಕ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರಿಗೆ ಬೆಂಕಿಹೊತ್ತಿಕೊಂಡು ಸುಟ್ಟು ಕರಕಲಾಗಿದ್ದು, ಒಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಚಿಕ್ಕಬಳ್ಳಾಪುರ ತಾಲೂಕಿನ ಕುಪ್ಪಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ವೆಂಕಟೇಶಪುರ ನಿವಾಸಿ, ಸಾಫ್ಟ್ವೇರ್ ಎಂಜಿನೀಯರ್ ಮಹಮ್ಮದ್ ತನ್ವೀರ್ (27) ಮೃತಪಟ್ಟ ಯುವಕ. ಘಟನೆಯಲ್ಲಿ ಅಜೀಜ್ ಖಾನ್, ಅಹ್ರಾರ್ ಅಹ್ಮದ್, ಜುಬೇದ್ ಅಹ್ಮದ್, ಮಹಮದ್ ಆಸೀಫ್ ಮತ್ತು ಮಹಮದ್ ಇಬ್ರಾಹಿಂ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ದರ್ಗಾಗೆ ಜಾಗರಣೆಗೆಂದು ಆರು ಮಂದಿ ಬಂದಿದ್ದರು. ಜಾಗರಣೆ ಮುಗಿಸಿಕೊಂಡು ಮಂಗಳವಾರ ಬೆಳಗ್ಗೆ ಬೆಂಗಳೂರು ಕಡೆಗೆ ವಾಪಸಾಗುತ್ತಿದ್ದರು. ಈ ವೇಳೆ ನಂದಿಯಿಂದ ಕುಪ್ಪಹಳ್ಳಿಯ ಕ್ರಾಸ್ ಬಳಿಗೆ ಬರುತ್ತಿದ್ದಂತೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿತು. ನಂತರ ಕಾರಿಗೆ ಬೆಂಕಿ ಹತ್ತಿ ಭಸ್ಮವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

