ಕೋಲಾರ

ಮರಬಹಳ್ಳಿ ಶಾಲೆಯಲ್ಲಿ ಕ್ಷೀರಭಾಗ್ಯ ಯೋಜನೆಗೆ ಚಾಲನೆ

Published On :

ಚಿಂತಾಮಣಿ: ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮರಬಹಳ್ಳಿಯಲ್ಲಿ ಮಂಗಳವಾರ ರಾಜ್ಯ ಸರ್ಕಾರ ಕ್ಷೀರ ಯೋಜನೆ ಅನುಷ್ಠಾನಕ್ಕೆ ತಂದಿದೆ. ಮಕ್ಕಳ ಹಾಜರಾತಿ ಹೆಚ್ಚಿಸಲು ಇದು ಮಹತ್ವದ ಯೋಜನೆ ಎಂದು ಎಸ್ಡಿಎಂಸಿ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಶಾಲೆಯ ಎಲ್ಲಾ ಮಕ್ಕಳಿಗೂ ಹಾಲು ವಿತರಿಸಿ ಮುಖ್ಯಶಿಕ್ಷಕ ಎನ್.ರಮೇಶ್ ಮಾತನಾಡಿ, ಪೋಷಕರ ಸಹಕಾರ ಮತ್ತು ಸಲಹೆಗಳು ಉತ್ತಮವಾಗಿ ಇರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆ ಹೆಚ್ಚು ಹಾಜರಾತಿ ಪಡೆಯಲು ಸಾಧ್ಯವಾಯಿತು ಎಂದರು. ರಾಜ್ಯ ಅಕ್ಷರ ದಾಸೋಹ ಯೋಜನಾಧಿಕಾರಿಗಳ ಆದೇಶ ಸ್ಟೆಮ್ ಎನ್ಜಿಓ ಸಂಸ್ಥೆಯವರು ಶಾಲೆಗೆ ಭೇಟಿ ನೀಡಿ ಬಿಸಿಯೂಟ ತಯಾರಿಕೆ ಹಾಗೂ ವಿತರಣೆ ಸ್ವಚ್ಛತೆ, ಮಕ್ಕಳ ಹಾಜರಾತಿ, ಸಮವಸ್ತ್ರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಸ್ಡಿಎಂಸಿ ಸದಸ್ಯರಾದ ಮಧು ಮತ್ತು ಕೃಷ್ಣಪ್ಪ, ಸಿ.ಆರ್.ಪಿ ಶಂಕರಪ್ಪ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.