ಕೋಲಾರ

9ಕ್ಕೆ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

Published On :

ಚಿಂತಾಮಣಿ: ಶ್ರೀ ಕ್ಷೇತ್ರ ಕೈವಾರದ ಯೋಗಿನಾರೇಯಣ ಮಠದ ಸಭಾಂಗಣದಲ್ಲಿ ಶ್ರಾವಣ ಮಾಸದ ಮೊದಲ ಶುಕ್ರವಾರ ಆ.9ರಂದು ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಕೈವಾರ ಯೋಗಿನಾರೇಯಣ ಮಠದ ಧರ್ಮಾಧಿಕಾರಿ ಡಾ. ಎಂ.ಆರ್.ಜಯರಾಮ್ ತಿಳಿಸಿದ್ದಾರೆ.  ತಿರುಪತಿ ತಿರುಮಲ ದೇವಸ್ಥಾನ, ವೆಂಕಟೇಶ್ವರ ಭಕ್ತಿ ಚಾನಲ್, ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನ ಹಾಗೂ ಶ್ರೀ ಯೋಗಿನಾರೇಯಣ ಮಠದ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 9ರಿಂದ 10 ಗಂಟೆವರೆಗೆ ನಡೆಯುತ್ತದೆ. ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಮುತ್ತೈದೆಯರು ತಮ್ಮ ಹೆಸರನ್ನು ಶ್ರೀಯೋಗಿ ನಾರೇಯಣ ಮಠದ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ. ಮೊದಲು ಬಂದವರಿಗೆ ಆದ್ಯತೆ. ಈ ಪೂಜಾ ಕಾರ್ಯಕ್ರಮವೂ ತಿರುಮಲ ತಿರುಪತಿ ದೇವಾಲಯದ ಶ್ರೀ ವೆಂಕಟೇಶ್ವರ ಭಕ್ತಿ ಚಾನಲ್ನಲ್ಲಿ ನೇರ ಪ್ರಸಾರವಾಗುತ್ತದೆ.
200ನೇ ವರ್ಷಾಚರಣೆ
ಚಿಂತಾಮಣಿ: ಕೈವಾರದಲ್ಲಿ ಜೀವಂತ ಸಮಾಧಿಸ್ಥರಾಗಿರುವ ಸದ್ಗುರು ಶ್ರೀ ಯೋಗಿ ನಾರೇಯಣ ತಾತಯ್ಯನವರು ತ್ರಿಕಾಲಜ್ಞಾನಿಗಳಾಗಿ ಕಾಲಜ್ಞಾನವನ್ನು ಕ್ರಿ.ಶ.1813ರ ಶ್ರೀಮುಖ ನಾಮ ಸಂವತ್ಸರ ಶ್ರಾವಣ ಮಾಸ ಪಂಚಮಿಯಂದು ರಾತ್ರಿ 2 ಗಂಟೆಗೆ ರಚಿಸಿರುವರು.
ಆ.11ರಂದು ಮಠದಲ್ಲಿ ಕಾಲಜ್ಞಾನ ರಚನೆಯ 200ನೇ ವರ್ಷಾಚರಣೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.