ಕೋಲಾರ

ಆಧಾರ್ ಕೇಂದ್ರಗಳ ಪುನಾರಂಭಕ್ಕೆ ಒತ್ತಾಯ

Published On :

ಗುಡಿಬಂಡೆ:  ಪಟ್ಟಣ ಸೇರಿ ತಾಲೂಕಿನ ಹೋಬಳಿ ಕೇಂದ್ರಗಳಲ್ಲಿ ಆಧಾರ್ ಕೇಂದ್ರಗಳನ್ನು ಪುನಾರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳನ್ನು ಜನ ಒತ್ತಾಯಿಸಿದ್ದಾರೆ.
ತಾಲೂಕಿನಾದ್ಯಂತ ಬಹಳಷ್ಟು ಜನರಿಗೆ ಇನ್ನೂ ಸಹ ಆಧಾರ್ ಕಾರ್ಡ್ ಸೌಲಭ್ಯ ಲಭಿಸಿಲ್ಲ. ಈ ಹಿಂದೆ ಪಟ್ಟಣದ ಅಂಚೆ ಕಚೇರಿಯಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆದರೂ, ಕಾರಣಾಂತರದಿಂದ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಬ್ಯಾಂಕ್ ಮತ್ತು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು, ಪಡಿತರ ಚೀಟಿ ಹಾಗೂ ಅಡುಗೆ ಅನಿಲ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಅವಶ್ಯವಾಗಿದೆ. ಆದರೆ, ಬಹುತೇಕರಿಗೆ ಸೌಲಭ್ಯ ಲಭ್ಯವಾಗದೆ ಹಿನ್ನಡೆಯಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ, ನೋಂದಣಿ ಮಾಡಿಸಿದ ಬಹುತೇಕರಿಗೆ ಇಲ್ಲಿಯ ತನಕ ಕಾರ್ಡ್ಗಳು ಲಭ್ಯವಾಗಿಲ್ಲ. ಮತ್ತೊಂದು ಕಡೆ ನೋಂದಣಿ ಮಾಡಿಸದೇ ಇರುವ ಅನೇಕರಿಗೆ ನೋಂದಣಿ ಕೇಂದ್ರಗಳೇ ಇಲ್ಲ ಎಂಬಂತಾಗಿದೆ. ಇದರಿಂದ ತಾಲೂಕಿನ ಹಲವರು ವಿಧಿಯಿಲ್ಲದೇ ಪಕ್ಕದ ತಾಲೂಕುಗಳಾದ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಕೇಂದ್ರಗಳಿಗೆ ತೆರಳಿ ತಮ್ಮ ಹೆಸರುಗಳನ್ನು ಅಲ್ಲಿನ ಕೇಂದ್ರಗಳಲ್ಲಿ ನೋಂದಾಯಿಸಿದ್ದಾರೆ. ಈಗ ಅಲ್ಲಿಯೂ ಸಹ ಕೇಂದ್ರಗಳನ್ನು ಮುಚ್ಚಲಾಗಿದೆ. ಆದ್ದರಿಂದ ತಾಲೂಕು ಆಡಳಿತ ಸಮಸ್ಯೆ ಬಗ್ಗೆ ಗಮನಹರಿಸಿ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡುವುದು ಅವಶ್ಯವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.