ಕ್ರೀಡಾಕೂಟ ಸಮಾರೋಪ
ಶಿಡ್ಲಘಟ್ಟ: ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹೋಬಳಿಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಸಮಾರೋಪಗೊಂಡಿತು. ಸರ್ಕಾರಿ ಪ್ರೌಢಶಾಲೆಯ ಸುಮಾರು 250 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಕುಂದಲಗುಕರ್, ಸರ್ಕಾರಿ ಪ್ರೌಢಶಾಲೆ ದ್ಯಾವಪ್ಪನಗುಡಿ, ಪಲಿಚೇಲರ ಸರ್ಕಾರಿ ಪ್ರೌಢಶಾಲೆ, ಎಸ್ಆರ್ಇಟಿ ವೈ ಹುಣಸೇನಹಳ್ಳಿ, ಕದಿರಿನಾಯಕನಹಳ್ಳಿ, ಹನುಮಂತಪುರ ಬಿಜಿಎಸ್ ಶಾಲೆಗಳಿಂದ ಮಕ್ಕಳು ಭಾಗವಹಿಸಿದ್ದರು. ಉದ್ದ ಜಿಗಿತ, ಎತ್ತರ ಜಿಗಿತ, ಓಟ, ಕಬಡ್ಡಿ, ಖೋ ಖೋ, ವಾಲಿಬಾಲ್, ಥ್ರೋಬಾಲ್ ಮುಂತಾದ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಕ ಶ್ರೀನಿವಾಸ್ ಮಾತನಾಡಿದರು.
ಯೋಧರ ಹತ್ಯೆ ಖಂಡಿಸಿ ಪ್ರತಿಭಟನೆ
ಕೋಲಾರ: ಜಮ್ಮು ಕಾಶ್ಮೀರದ ಪೂಂಚ್ ವಲಯದ ಬಳಿ ಭಾರತೀಯ ಯೋಧರ ಮೇಲೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿ ಐವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಎಬಿವಿಪಿಯಿಂದ ಬುಧವಾರ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಭಾರತೀಯ ಯೋಧರನ್ನು ಕೊಂದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಎಬಿವಿಪಿ ಸಂಘಟನಾ ಕಾರ್ಯದರ್ಶಿ ಚೇತನ್, ಸಹ ಪ್ರಮುಖ್ ಪುನೀತ್ಕುಮಾರ್, ನಗರ ಕಾರ್ಯದರ್ಶಿ ಹರೀಶ್, ಮುರುಳಿ, ನವೀನ್, ಅಭಿ, ಪಲ್ಲವಿ, ಮುನಿವೆಂಕಟೇಶ್, ಲಾವಣ್ಯ, ವಿಕಾಶ್, ಅಶ್ವಿನಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನದಿಗೆ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು
ಹಾಸನ: ತಾಲೂಕಿನ ಗೊರೂರುನಲ್ಲಿರುವ ಹೇಮಾವತಿ ಜಲಾಶಯದ ಕ್ರಸ್ಟ್ ಗೇಟ್ಗಳಿಂದ ಧುಮ್ಮಿಕ್ಕಿ ಹರಿಯುವ ನೀರಿನ ಸೌಂದರ್ಯ ವೀಕ್ಷಿಸಲು ಹೋಗಿದ್ದ ಹಾಸನ ನಗರದ ಕಾಲೇಜಿನ ವಿದ್ಯಾರ್ಥಿನಿ ನದಿಗೆ ಜಾರಿಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಶ್ರೀನಗರ ಬಡಾವಣೆ ನಿವಾಸಿ ಸಬೀನಾ ಸಾವನ್ನಪ್ಪಿದ ವಿದ್ಯಾರ್ಥಿನಿ. ಬಿಇಜಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಬಿಎಂ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆ ತನ್ನ ಸ್ನೇಹಿತರಾದ ತುಂಗಾ, ಸೌಮ್ಯ ಮತ್ತು ಸಂಗೀತ ಎಂಬುವರೊಡನೆ ನದಿಗಿಳಿದು ಆಟವಾಡುತ್ತಿದ್ದಾಗ ಆಕಸ್ಮಿಕ ಜಾರಿ ಮೃತಪಟ್ಟಿದ್ದಾರೆ. ಮೃತದೇಹದ ಪತ್ತೆಗಾಗಿ ಶೋಧನಾ ಕಾರ್ಯ ನಡೆಯತ್ತಿದೆ ಎಂದು ಎಸ್ಪಿ ರವಿ ದ್ಯಾಮಪ್ಪ ಚನ್ನಣ್ಣವರ್ ತಿಳಿಸಿದ್ದಾರೆ. ಗೊರೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

