ದಲಿತ ವಿದ್ಯಾರ್ಥಿಗಳಿಗೆ ವೇತನ ನೀಡದೆ ಅಧಿಕಾರಿಗಳ ಕಿರುಕುಳ: ವೀರಯ್ಯಗೆ ದೂರು
ಚಿಂತಾಮಣಿ: ದಲಿತ ವಿದ್ಯಾರ್ಥಿಗಳಿಗೆ ವೇತನ ನೀಡದೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಇಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯನವರಿಗೆ ದೂರು ನೀಡಿದರು.
ಪಟ್ಟಣದಲ್ಲಿನ ಕೆ.ಆರ್. ಬಡಾವಣೆಯಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿಳಂಬ ತಾರತಮ್ಯ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲದ ಕಾರಣ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ಸಂಘಟನೆಯ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಏಕಪಕ್ಷೀಯ ದೋರಣೆ ವಿರುದ್ಧ ಆರೋಪಿಸಿ ಪ್ರತಿಭನೆ ನಡೆಸಿದರು.
ಎಸ್.ಎಸ್ಸಿ, ಎಸ್.ಎಸ್ಟಿ ವಿದ್ಯಾರ್ಥಿ ವೇತನ: ತಾಲೂಕಿನ ವ್ಯಾಪ್ತಿಯ ಸರ್ಕಾರಿ ಕಾಲೇಜು ಬಡ ದಲಿತ ವಿದ್ಯಾರ್ಥಿಗಳಿಗೆ ಸುಮಾರು 508 ಜನಕ್ಕೆ ವಿದ್ಯಾರ್ಥಿ ವೇತನ ನೀಡದೆ ತಾಲೂಕು ಅಧಿಕಾರಿ ಹಾಗೂ ವ್ಯವಸ್ಥಾಪಕ ಕಿರುಕುಳ ವಿದ್ಯಾರ್ಥಿಗಳಿಗೆ ನೀಡುತ್ತಾ ಖಾಸಗಿ ವಿದ್ಯಾಸಂಸ್ಥೆಗಳ ಜೊತೆ ಒಳ ಒಪ್ಪಂದ ಮಾಡಿಕೊಂಡು ದಲಿತ ಬಡ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವನ್ನು ಖಂಡಿಸಿ ಇಂದು ನೂರಾರು ವಿದ್ಯಾರ್ಥಿಗಳು ಅಧಿಕಾರಿಗಳ ದೋರಣೆ ವಿರುದ್ಧ ಆಕ್ರೋಶಗೊಂಡು ಇವರನ್ನು ಕೂಡಲೇ ಅಮಾನತ್ತು ಪಡಿಸಿ ಸಂಬಂಧಪಟ್ಟ ಮೇಲಾಧಿಕಾರಿಗಳು ತಾಲೂಕಿಗೆ ಬರುವ ವಿದ್ಯಾರ್ಥಿ ವೇತನವನ್ನು ಕೂಡಲೇ ದೊರಕಿಸಿ ಕೊಡಬೇಕೆಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಡಿ.ಎಸ್.ವೀರಯ್ಯ: ವಿದ್ಯಾರ್ಥಿಗಳನ್ನು ಸಮಾದಾನ ಪಡಿಸಿ ನಂತರ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ಮೇಲಾಧಿಕಾರಿಗಳ ಮುಖಾಂತರ ಮಾತುಕಥೆ ನಡೆಸಿ ಒಂದು ವಾರದ ಒಳಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಬಡ ದಲಿತರ ವಿದ್ಯಾರ್ಥಿ ವೇತನವನ್ನು ವಿತರಿಸದೆ ಕಾಲಹರಣ ಮಾಡುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮಹಮದ್ ಫೀರ್ ಹಾಗೂ ವ್ಯವಸ್ಥಾಪಕ ಮಹಮದ್ ಶೌಕತ್ ಉಲ್ಲಾ ಕಾರ್ಯವೈಖರಿ ವಿರುದ್ಧ ಡಿ.ಎಸ್. ವೀರಯ್ಯ ಗರಂ ಆದರು. ಕೂಡಲೇ ಇವರ ಮೇಲೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ದೂರು ನಿಡುವುದಾಗಿ ತಿಳಿಸಿದರು. ನಂತರ ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ವಾರದೊಳಗೆ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ಕೈಸೇರುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಬಿವಿಪಿ ಸಂಘಟನೆಯ ಮುಖಂಡರಾದ ಮಂಜುನಾಥರೆಡ್ಡಿ, ಸುರೇಶ್, ನವಾಜ್, ಸಯ್ಯದ್, ಹರ್ಷಿಯಾ, ಶ್ವೇತಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

