ಕೋಲಾರ

ಪತ್ನಿ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಎಎಸ್ ಅಧಿಕಾರಿ

Published On :

ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಉಪ ಖಜಾನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೆಎಎಸ್ ಅಧಿಕಾರಿ ರವಿ (32) ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಸಾವಿಗೆ ಪತ್ನಿ ಸುಕನ್ಯಾ ಕಿರುಕುಳವೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಬರೆದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಂತಾಮಣಿ ತಾಲೂಕಿನ ಸೀಗೇಹಳ್ಳಿ ಗ್ರಾಮದ ರವಿ 2002ರಲ್ಲಿ ಪೊಲೀಸ್ ಇಲಾಖೆಗೆ ಸೇರಿ 8 ವರ್ಷಗಳ ಕಾಲ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ನಂತರ ಕೆಎಎಸ್ ಪರೀಕ್ಷೆ ಪಾಸ್ ಮಾಡಿಕೊಂಡು 2011ರಿಂದ ಶಿಡ್ಲಘಟ್ಟದ ಉಪ ಖಜಾನೆಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ದಂಪತಿಗೆ ಧನುಷ್ (9) ಹಾಗೂ ಸಿಂಚನಾ (7) ಎಂಬ ಮಕ್ಕಳಿದ್ದಾರೆ. ಪತ್ನಿ ಒತ್ತಾಯದ ಮೇರೆಗ ಕೋಲಾರಕ್ಕೆ ಸಂಸಾರವನ್ನು ಸ್ಥಳಾಂತರಿಸಿದ್ದರು. ಕೆಎಎಸ್ ಅಧಿಕಾರಿಯಾದ ನಂತರ ಗಂಡ-ಹೆಂಡತಿ ನಡುವೆ ವಿವಿಧ ವಿಷಯಗಳಿಗೆ ಮನಸ್ತಾಪ ಹೆಚ್ಚಾಗಿ, ಸಂಸಾರದಲ್ಲಿ ಬಿರುಕು ಬಿಟ್ಟಿತ್ತು. ಗಂಡ ದೊಡ್ಡ ಹುದ್ದೆಯಲ್ಲಿದ್ದರೂ ಹಣದಾಸೆಯಿಂದ ಸುಕನ್ಯಾ ಖಾಸಗಿ ಕಂಪನಿಯೊಂದಕ್ಕೆ ಕೆಲಸಕ್ಕೆ ಸೇರಿದ್ದರು. ಮನೆಗೆ ಸರಿಯಾಗಿ ಬರುತ್ತಿರಲಿಲ್ಲ. ಪ್ರಶ್ನಿಸಿದರೆ, ಜಗಳ ಮಾಡುತ್ತಿದ್ದಳು ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.
ಸುಕನ್ಯಾ ಧನದಾಹಿಯಾಗಿದ್ದು, ಮಲಗುವಾಗ ಸದಾ ಚಾಕನ್ನು ಇರಿಸಿಕೊಳ್ಳುತ್ತಿದ್ದಳು. ನನಗೆ ಏಡ್ಸ್ ಇದೆ ಎಂದು ಆರೋಪಿಸುತ್ತಿದ್ದಳು. ಈ ಕಾರಣಕ್ಕಾಗಿಯೇ ರಕ್ತ ಪರೀಕ್ಷೆಯನ್ನೂ ಮಾಡಿಸಿಕೊಂಡಿದ್ದೆ. ಮಕ್ಕಳೊಂದಿಗೂ ಬೆರೆಯಲು ಬಿಡುತ್ತಿರಲಿಲ್ಲ. ಅಲ್ಲದೇ, ತನ್ನ ಪೋಷಕರನ್ನು ದೂರ ಮಾಡಿದ್ದಳು ಎಂದು ರವಿ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.
ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.