ಬರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಿ
ಕ.ಪ್ರ.ವಾರ್ತೆ ಕೋಲಾರ ಆ.7
ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಬೇಕು ಹಾಗೂ ಬ್ಯಾಂಕ್ ಅಧಿಕಾರಿಗಳು ಸಾಲ ವಸೂಲಾತಿ ನೆಪದಲ್ಲಿ ವಿನಾಕಾರಣ ಕಿರುಕುಳ ನೀಡುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕೋಲಾರ ಜಿಲ್ಲಾ ಸಮಿತಿಯು ವತಿಯಿಂದ ಹಮ್ಮಿಕೊಂಡಿದ್ದ ಭಾಗವಹಿಸಿದ್ದ ರೈತರು ಕಳೆದ 8 ವರ್ಷಗಳಿಂದಲೂ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ಜನ-ಜಾನುವಾರುಗಳಿಗೆ ಕುಡಿಯಲು, ಕೃಷಿಗೆ ನೀರು ಸಿಗದಿರುವುದರಿಂದ ಬರಪೀಡಿತ ಜಿಲ್ಲೆಗೆ ಹೆಚ್ಚಿನ ಅನುಕೂಲ ಮಾಡುವಂತೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಲು ಪರಮಶಿವಯ್ಯ ವರದಿ ಅನುಷ್ಠಾನಕ್ಕಾಗಿ ಡಿಪಿಆರ್ ಯೋಜನೆಗೆ ಹಣ ಬಿಡುಗಡೆ ಮಾಡಿದ್ದರೂ ಸಹ ಇದುವರೆವಿಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಡಿಪಿಆರ್ ಯೋಜನೆಗೆ ಮಾತ್ರ ಬಜೆಟ್ನಲ್ಲಿ ಹಣ ಬಿಡುಗಡೆ ಮಾಡಿಕೊಂಡು ಕಾಲ ಕಳೆಯುತ್ತಿದ್ದರೆ ಯೋಜನೆ ಅನುಷ್ಠಾನ ಸಾಧ್ಯವಾಗುವುದಿಲ್ಲವೆಂದರು.
ಜಿಲ್ಲಾ ಕಾರ್ಯಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ ಮಾತನಾಡಿ ತಾಲೂಕು ಕಚೇರಿಗಳಲ್ಲಿ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್ ಅವರಿಗೆ ನೀಡಲಾಗಿತ್ತು. ಆದರೆ ಈಗ ಅದನ್ನು ತೆಗೆದು ಉಪವಿಭಾಗಾಧಿಕಾರಿಗಳಿಗೆ ನೀಡಿರುವುದರಿಂದ ರೈತರಿಗೆ ಬಹಳ ತೊಂದರೆಯಾಗಿರುತ್ತದೆ. ಆದ್ದರಿಂದ ಕೂಡಲೇ ಪಹಣಿ ತಿದ್ದುಪಡಿ ಅಧಿಕಾರವನ್ನು ಮತ್ತೆ ತಹಶೀಲ್ದಾರ್ ಅವರಿಗೆ ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವತ್ಥರೆಡ್ಡಿ, ಹಿಂದಿನ ಸರ್ಕಾರಗಳು ರೈತರ ಪಡೆದಿರುವ 25 ಸಾವಿರ ಸಾಲ ಮನ್ನಾ ಎಂದು ಘೋಷಿಸಿದ್ದರೂ ಇದುವರೆವಿಗೂ ಈ ಯೋಜನೆ ಅನುಷ್ಠಾನವಾಗಿರುವುದಿಲ್ಲ. ಹೊಸ ಸಾಲ ಕೇಳಲು ಹೋದರೆ ಇನ್ನೂ ಹಳೇ ಸಾಲವೇ ಬಂದಿಲ್ಲ ಇನ್ನೂ ನಿಮಗೆ ಹೊಸ ಸಾಲ ಎಲ್ಲಿಂದ ನೀಡುವುದು ಎಂದು ರೈತರನ್ನು ಪ್ರಶ್ನಿಸುತ್ತಾರೆ ಈ ವ್ಯವಸ್ಥೆ ಕೂಡಲೇ ನಿಲ್ಲಬೇಕೆಂದರು.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಆಹಾರ ಇಲಾಖೆಯ ಶಿರಸ್ತೇದಾರ್ ಅವರು ಮನವಿ ಪತ್ರವನ್ನು ಸ್ವೀಕರಿಸಿ ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದೆಂದರು. ರೈತ ಸಂಘದ ಮುಖಂಡರಾದ ತೆರನಹಳ್ಳಿ ವೆಂಕಟೇಶಗೌಡ, ದೊಡ್ಡಸಬ್ಬೇನಹಳ್ಳಿ ಕಣಷ್ಣಪ್ಪ, ವೀರಾಪುರ ಮಂಜುನಾಥ್, ಸೈಯದ್ ಮುಜೀಬ್ಪಾಷ, ರಘು, ಹೊಳಲಿಹೊಸೂರು ಚಂದ್ರಪ್ಪ, ಅಗ್ರಹಾರ ಸೋಮರಸನಹಳ್ಳಿ ನಾರಾಯಣಸ್ವಾಮಿ, ದೊಡ್ನಹಳ್ಳಿ ಕೃಷ್ಣಪ್ಪ, ಕೂತಾಂಡಹಳ್ಳಿ ನಾರಾಯಣಸ್ವಾಮಿ, ನಂಜುಂಡಪ್ಪ, ಮಾಸ್ತೇನಹಳ್ಳಿ ನಾರಾಯಣಸ್ವಾಮಿ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

