ನಾರಾಯಣಸ್ವಾಮಿ, ರಾಜಕುಮಾರ್ ಆಯ್ಕೆ
ಬಂಗಾರಪೇಟೆ: ಕ್ಷೇತ್ರದ ಎರಡು ಗ್ರಾಮ ಪಂಚಾಯ್ತಿಗಳಲ್ಲಿ ತೆರವಾಗಿದ್ದ ಎರಡು ಸ್ಥಾನಗಳಿಗೆ ಕಳೆದ ಭಾನುವಾರ ನಡೆದ ಉಪ ಚುನಾವಣೆಯ ಮತ ಎಣಿಕೆ ಬುಧವಾರ ತಾಲೂಕು ಕಚೇರಿಯಲ್ಲಿ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ತಾಲೂಕಿನ ಆಲಂಬಾಡಿ ಜೋತೇನಹಳ್ಳಿ ಪಂಚಾಯ್ತಿಯ ಗಾಜಗ ಗ್ರಾಮದ ಸದಸ್ಯರಾಗಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬೆಂಬಲಿಗ ಕೃಷ್ಣಪ್ಪ ಹಾಗೂ ತೊಪ್ಪನಹಳ್ಳಿ ಪಂಚಾಯ್ತಿ ಪುರಂ ಗ್ರಾಮದ ಭೂಲಕ್ಷ್ಮಮ್ಮ ನಿಧನದಿಂದಾಗಿ ಚುನಾವಣೆ ನಡೆದಿತ್ತು.
ಗಾಜಗ ಗ್ರಾಮದ ಬಿಜೆಪಿ ಬೆಂಬಲಿತ ಸದಸ್ಯ ನಾರಾಯಣಸ್ವಾಮಿ 248 ಮತ ಪಡೆದು ಎದುರಾಳಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ್ ಅವರನ್ನು ಸೋಲಿಸಿ ಆಯ್ಕೆಯಾಗಿದ್ದಾರೆ. ಶ್ರೀನಿವಾಸ್ ಅವರು ಕೃಷ್ಣಪ್ಪ ಸಹೋದರ. ತೊಪ್ಪನಹಳ್ಳಿ ಪಂಚಾಯ್ತಿ ಪುರಂ ಗ್ರಾಮದ ಬೂಲಕ್ಷ್ಮಮ್ಮ ನಿಧನದಿಂದ ಮರು ಚುನಾವಣೆಯಲ್ಲಿ ಅವರ ಮಗ ರಾಜಕುಮಾರ್ 466 ಮತಗಳನ್ನು ಪಡೆದು ಎದುರಾಳಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಅವರನ್ನು ಪರಾಭವಗೊಳಿಸಿ ಚುನಾಯಿತರಾಗಿದ್ದಾರೆ.
ವಿಧಾನಸಭೆ ಚುನಾವಣೆ ಬಳಿಕ ನಡೆದ ಪಂಚಾಯ್ತಿಯ ಎರಡು ಸ್ಥಾನಗಳ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದವರು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು. ಎರಡೂ ಪಕ್ಷಗಳು ತಲಾ ಒಂದೊಂದನ್ನು ದಕ್ಕಿಸಿಕೊಳ್ಳುವ ಮೂಲಕ ಸಮಬಲ ಹೋರಾಟ ಮಾಡಿದ್ದಾರೆ. ಫಲಿತಾಂಶ ಹೊರ ಬರುತ್ತಿದ್ದಂತೆ ಎರಡು ಪಕ್ಷಗಳ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

