ಕೋಲಾರ

ಭ್ರಷ್ಟಾಚಾರಕ್ಕೆ ಕಡಿವಾಣ: ಕಾಯ್ದೆ ತಿದ್ದುಪಡಿ ಶ್ಲಾಘನೀಯ

Published On :

ಚಿಕ್ಕಬಳ್ಳಾಪುರ: ಸಹಕಾರಿ ಕ್ಷೇತ್ರದಲ್ಲಿ ಪಾರದರ್ಶಕತೆಯನ್ನು ಕಾಪಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಕಾರಿ ಕ್ಷೇತ್ರದ ಸದಸ್ಯರ ಆಯ್ಕೆ ಸಂಬಂಧಿತ 97 ಕಾಯ್ದೆ ತಿದ್ದುಪಡಿ ಮಾಡಿರುವುದು ಶ್ಲಾಘನೀಯ ಎಂದು ರಾಜ್ಯ ಸಹಕಾರಿ ಮಂಡಳದ ಅಧ್ಯಕ್ಷ ಹಾಲಪ್ಪ ಆಚಾರ್ ತಿಳಿಸಿದರು.   
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಸಹಕಾರಿ ಕ್ಷೇತ್ರ ಸರ್ಕಾರದ ಕಪಿಮುಷ್ಟಿಯಲ್ಲಿ ಸಿಕ್ಕಿ ಭ್ರಷ್ಟಾಚಾರದಂಥ ಪ್ರಕರಣ ಹೆಚ್ಚಾಗಿ ನಡೆಯುತ್ತಿದ್ದವು. ಆದರೇ 97 ರ ಕಾಯ್ದೆ ತಿದ್ದುಪಡಿಯಂತೆ ಚುನಾವಣೆ ಮೂಲಕ ಸದಸ್ಯರು ಹಾಗೂ ಅಧ್ಯಕ್ಷರ ಆಯ್ಕೆಯಾಗುವುದರಿಂದ ಭ್ರಷ್ಟಾಚಾರ ಹಾಗೂ ಇತರೆ ಸಮಸ್ಯೆಗಳು ನಡೆಯದಂತೆ ಕಡಿವಾಣ ಹಾಕಲು ಸಹಕಾರಿಯಾಗಿದೆ ಎಂದರು.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಸಹಕಾರ ಮಂಡಳ ಅಭಿವೃದ್ಧಿಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಹೋಲಿಕೆ ಮಾಡಿದ್ದಲ್ಲಿ ಈ ಜಿಲ್ಲೆಗಳು ಬಹಳಷ್ಟು ಹಿಂದುಳಿದಿವೆ. ಸಹಕಾರಿ ಕ್ಷೇತ್ರದ ಸದಸ್ಯರ ಆಯ್ಕೆ ಸಂಬಂಧಿತ ಜಾರಿಯಾಗಿರುವ 97ರ ತಿದ್ದುಪಡಿ ಪ್ರಕಾರ ಸಹಕಾರಿ ಕ್ಷೇತ್ರದ ಸದಸ್ಯರು ಹಾಗೂ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಸರ್ಕಾರ ಹಸ್ತಕ್ಷೇಪ ಮಾಡುವಂತಿಲ್ಲ. ಜನಪ್ರತಿನಿಧಿ ಅಯ್ಕೆಗೆ ನಡೆಯುವ ಚುನಾವಣೆಯಂತೆ ಸಹಕಾರಿ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ. ಚುನಾವಣೆ ಆಯೋಗದ ನೀತಿ ಸಂಹಿತೆಯಂತೆ ನಡೆಯಲಿರುವ ಚುನಾವಣೆಗೆ ಸಾರ್ವಜನಿಕರು ಮತ ಚಲಾಯಿಸುವ ಮೂಲಕ ಸದಸ್ಯರ ಆಯ್ಕೆ ಮಾಡಲಾಗುತ್ತದೆ ಎಂದರು.
ತಾವು ಮಂಡಲದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹಿಂದುಳಿದಿದ್ದ ಕೆಲವು ಸಹಕಾರ ಮಂಡಲಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿರುವುದಾಗಿ ತಿಳಿಸಿದರು. ಆ. 25 ರಂದು ನಡೆಯಲಿರುವ ಜಿಲ್ಲೆಯ ವಿವಿಧ ಸಹಕಾರಿ ಮಂಡಲಿಗಳ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸುವಂತೆ ಕರೆ ನೀಡಿದರು.  
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ, ತಾಲೂಕು ಅಧ್ಯಕ್ಷ ಶ್ರೀನಿವಾಸರೆಡ್ಡಿ, ನಗರ ಮಂಡಲ ಅಧ್ಯಕ್ಷ ಸುಬ್ಬರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.