ಕೋಲಾರ

ಇಂದು ಜಿಲ್ಲಾ ಮಟ್ಟದ ಸಾಂಸ್ಕೃತಿಕ ಉತ್ಸವ

Published On :

ಕೋಲಾರ: ಪಾಶ್ಚಿಮಾತ್ಯ ಸಂಸ್ಕೃತಿಯ ದಾಳಿಯಿಂದ ದೇಶಿಯ ಕಲೆ ಮತ್ತು ಸಂಸ್ಕೃತಿ ನಶಿಸಿಹೋಗುತ್ತಿದೆ. ಈ ನಾಡಿನ ಹಳ್ಳಿಯ ಸೊಗಡು ಉಳಿಸಿಕೊಳ್ಳುವ ಸಲುವಾಗಿ ಆ.10ರಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಜಾನಪದ ಕಲಾ ಸಂಘದ ಗೌರವಾಧ್ಯಕ್ಷ ಎಂ.ಎ. ಅನಿಲಕುಮಾರ್ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿನಿಮಾ, ಟಿ.ವಿ. ಮತ್ತು ಮೊಬೈಲ್‌ಗಳಿಂದ ಯುವಜನತೆ ಈ ನಾಡಿನ ಸಂಸ್ಕೃತಿ ಮರೆಯುತ್ತಿದ್ದು, ದೇಶಿಯ ಸಂಸ್ಕೃಯನ್ನು ಪ್ರೋತ್ಸಾಹಿಸಲು ಈ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕನ್ನಡ ಜಾನಪದ ಕಲಾ ಸಂಘದ ಅಧ್ಯಕ್ಷ ಜನ್ನಘಟ್ಟ ಕೃಷ್ಣಮೂರ್ತಿ, ಜಿಲ್ಲೆಯಲ್ಲಿ ಸಾಕಷ್ಟು ಕಲಾತಂಡಗಳಿದ್ದು, ಅವುಗಳನ್ನು ಪ್ರೋತ್ಸಾಹಿಸುವ ಜತೆಗೆ ನಮ್ಮ ಸಂಸ್ಕೃತಿ ಉಳಿಸಿಕೊಳ್ಳಲು ಈ ಉತ್ಸವವನ್ನು ಏರ್ಪಡಿಲಾಗಿದೆ ಎಂದರು.
ಉತ್ಸವದಲ್ಲಿ ಭರತ ನಾಟ್ಯ, ಜನಪದ ಗೀತಗಾಯನ, ಕೋಲಾಟ, ತತ್ವಪದ, ತಮಟೆ ವಾದನ, ಗಾರಡಿಗೊಂಬೆ, ಕೀಲುಕುದುರೆ, ಕಾವಡಿ, ಕಂಸಾಳೆ, ಚಕ್ಕೆ ಕೋಲಾಟ, ಸೋಬಾನ ಪದಗಳ ಸೇರಿದಂತೆ 30ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವರ್ತೂರ್ ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಶಾಸಕ ಕೆ.ಆರ್. ರಮೇಶಕುಮಾರ್ ಕಲಾವಿದರಿಗೆ ಪ್ರಶಸ್ತಿ ಪತ್ರ ಮತ್ತು ಸನ್ಮಾನ ನೆರವೇರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.