ಕೋಲಾರ

12ಕ್ಕೆ ಸಿದ್ದರಾಮಯ್ಯ ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ

Published On :

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ 65ನೇ ಹುಟ್ಟುಹಬ್ಬ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸುರವರ 98ನೇ ಜಯಂತಿ ಪ್ರಯುಕ್ತ ಆ.12 ರಂದು ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಅಧ್ಯಕ್ಷ ಕೆ.ಬಿ. ಶ್ರೀನಿವಾಸಮೂರ್ತಿ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಹರಿಕಾರರಾದ ಈ ಇಬ್ಬರು ನಾಯಕರ ಆದರ್ಶಗಳನ್ನು ಪಾಲಿಸುವ ಉದ್ದೇಶದಿಂದ ಸಿದ್ದರಾಯಯ್ಯ ಹಾಗೂ ದೇವರಾಜ ಅರಸು ಅವರ ಹುಟ್ಟು ಹಬ್ಬದ ದಿನವನ್ನು ಸದುಪಯೋಗ ಪಡಿಸಿಕೊಳ್ಳುತ್ತಿರುವುದಾಗಿ ಹೇಳಿದರು.
ಸಿದ್ದರಾಮಯ್ಯನವರ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ದೇವರಾಜ ಅರಸು ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸಹಕಾರ ನೀಡಿದ್ದು ಆ.12 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಸಿದ್ದರಾಮಯ್ಯ ಹಾಗೂ ದೇವರಾಜ ಅರಸು ಹುಟ್ಟು ಹಬ್ಬದ ಕಾರ್ಯದ ಉದ್ಘಾಟನೆ ಹಾಗೂ ನಗರದ ಅಂತರಗಂಗೆ ರಸ್ತೆಯಲ್ಲಿನ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸಹ ಮಾಡಲಾಗುವುದೆಂದರು. ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್ ಅವರ ಅಧ್ಯಕ್ಷತೆ ವಹಿಸಲಿದ್ದು ವಿಧಾನ ಪರಿಷತ್ ಸದಸ್ಯ ಭೈರತಿ ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಚನ್ನಕೇಶವ,ಊರುಬಾಗಿಲು, ಎಸ್. ರಘುನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ಕಾರ್ಯದರ್ಶಿ ಚಂಗೋಲಿ ನಾರಾಯಣಸ್ವಾಮಿ, ಮುಖಂಡರಾದ ಮುನಿರಾಜ್, ವೆಂಕಟೇಶ್‌ಗೌಡ, ಜಹೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.