ದರೋಡೆಗೆ ಹೊಂಚು; ಐವರ ಬಂಧನ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದರೋಡೆ ಮಾಡಲು ಯತ್ನಿಸಿ ಸಿಕ್ಕಿ ಬಿದ್ದು ಇದೀಗ ಪೊಲೀಸರ ಅತಿಥಿಗಳಾಗಿರುವ ಆರೋಪಿಗಳನ್ನು ಬೆಂಗಳೂರು ಮೂಲದ ರಂಜಿತ್ (17 ವರ್ಷ), ಆಕಾಶ್ (17 ವರ್ಷ), ರುದ್ರೇಶ್ (22 ವರ್ಷ), ಜೈಶ್ರೀರಾಮ್ (23 ವರ್ಷ), ಗಿರೀಶ್ (24 ವರ್ಷ) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ರಾಜೇಶ್ ಪರಾರಿಯಾಗಿದ್ದಾನೆ.
ಘಟನೆ ಹಿನ್ನೆಲೆ: ಎರಡು ಪಲ್ಸಾರ್ ಬೈಕ್ನಲ್ಲಿ ಬಂದ ಆರೋಪಿಗಳು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7 ರ ಬೀಚಗಾನಹಳ್ಳಿ ಕ್ರಾಸ್ನ್ ರಸ್ತೆ ಬದಿಯ ಬಳಿ ನಿಂತುಕೊಂಡಿದ್ದ ನಾರಾಯಣಮೂರ್ತಿ ಸೇರಿದಂತೆ ಮತ್ತಿತರರಿಗೆ ಲಾಂಗು ಮಚ್ಚು ತೋರಿಸಿ ನಿಮ್ಮ ಬಳಿ ಇರುವ ಹಣವನ್ನು ಕೊಡಿ, ಇಲ್ಲದಿದ್ದಲ್ಲಿ ಕೊಂದು ಹಾಕುತ್ತೇವೆ ಎಂದು ಬೆದರಿಸಿದ್ದಾರೆ.
ಅವರಿಂದ ಹಣ ಮತ್ತು ಮೊಬೈಲ್, ವಾಚುಗಳನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸ್ಥಳೀಯರು ಪೊಲೀಸರಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.
ಇದರಿಂದ ಕಾರ್ಯ ಪ್ರವೃತ್ತರಾದ ಗುಡಿಬಂಡೆ ಪೊಲೀಸರು ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ ಬಳಿ ಆರೋಪಿಗಳನ್ನು ಹಿಡಿದುಕೊಂಡು ಬಂಧಿಸಿದ್ದಾರೆ. ಆರೋಪಿಗಳಿಂದ 19,000 ನಗದು,6 ಮೊಬೈಲ್, ವಾಚ್ ಸೇರಿದಂತೆ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

