ಲೋಡ್ ಶೆಡ್ಡಿಂಗ್: ರೈತ ಸಂಘ ಖಂಡನೆ
ಕೋಲಾರ: ರಾಜ್ಯದ ಜಲಾಶಯಗಳು ತುಂಬಿ ಹರಿಯುತ್ತಿದ್ದು ಹೆಚ್ಚಿನ ವಿದ್ಯುತ್ ಉತ್ಪಾದನೆ ಆರಂಭವಾಗಿದ್ದರೂ ಜಿಲ್ಲೆಯಲ್ಲಿ ಮಾತ್ರ ಅಸಮರ್ಪಕ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಬೆಸ್ಕಾಂ ಅಧಿಕಾರಿಗಳ ಹಿಟ್ಲರ್ ಧೋರಣೆಯಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ ಖಂಡಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸುಮಾರು ದಿನಗಳಿಂದ ಸಾರ್ವಜನಿಕರಿಗೆ ರೈತರಿಗೆ ಹಾಗೂ ಜನಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ, ರೈತರು ಬೆಳೆಯುವ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯವಾಗದೆ ಬೆಳೆಗಳು ನಾಶವಾಗುತ್ತಿವೆ ಎಂದು ಕಿಡಿಕಾರಿದ್ದಾರೆ.
ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯಲು ನೀರಿಲ್ಲದೇ ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ, ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡದೇ ಇಷ್ಟ ಬಂದ ಹಾಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡುತ್ತಿದ್ದಾರೆ. ರೈತರು ಸಾಲ ಮಾಡಿ ಬೆಳೆ ಮೇಲೆ ಹಾಕಿರುವ ಬಂಡವಾಳ ವಾಪಸ್ ಬರದೆ ಆತ್ಮಆತ್ಯೆ ಕಡೆ ಮುಖಮಾಡುವ ಪರಿಸ್ಥಿತಿ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.
ಶಾಲಾ ಮಕ್ಕಳು ರಾತ್ರಿ ಓದಲು ಹಾಗೂ ಶಾಲೆಯಲ್ಲಿ ಕೊಟ್ಟಿರುವ ಹೋಂವರ್ಕ್ ಮಾಡಲು ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳು ಆಡಿದ್ದೇ ಆಟವಾಗಿದೆ. ಪಟ್ಟಣದಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿ ತುಂಬಿ ದುರ್ನಾತ ಬೀರುತ್ತಿರು ಕಾರಣದಿಂದಾಗಿ ಸೊಳ್ಳೆಗಳ ಕಾಟ ಮೀತಿ ಮೀರುತ್ತಿದೆ. ರಾತ್ರಿ ನಿದ್ದೆ ಮಾಡಲು ವಿದ್ಯುತ್ ಇಲ್ಲದೆ ಆದರೆ ಇದನ್ನೆಲ್ಲ ಕಂಡು ಕಾಣದಂತೆ ಅಧಿಕಾರಿಗಳು ಜಾಣರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

