ಪ್ರಸನ್ನ ವೆಂಕಟೇಶ್ವರಸ್ವಾಮಿಗೆ ಹೂವಿನ ಅಲಂಕಾರ
ಮಾಲೂರು: ತಾಲೂಕಿನ ಚಿಕ್ಕತಿರುಪತಿಯ ಇತಿಹಾಸ ಪ್ರಸಿದ್ಧ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಥಮ ಶನಿವಾರ ಇಪ್ಪತ್ತು ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿ ದರ್ಶನ ಪಡೆದರು.
ದೇವರಿಗೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಗಿನ ಸುಪ್ರಭಾತ ಸೇವೆಯಿಂದಲ್ಲೇ ಸ್ವಾಮಿಯ ದರ್ಶನ ಪಡೆಯಲು ಭಕ್ತರು ಸರದಿಯಲ್ಲಿ ನಿಂತಿದ್ದರು. ಸ್ವಾಮಿಯ ವಿಶೇಷ ದರ್ಶನಕ್ಕಾಗಿ ಭಕ್ತರಿಗೆ 50 ದರದ ವಿಶೇಷ ಪ್ರವೇಶ ವ್ಯವಸ್ಥೆ ಮಾಡಲಾಗಿತ್ತು.
ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಭಕ್ತರಿಗೆ ದೇವಾಲಯ ಸಮಿತಿ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿತ್ತು. ಮುಡಿ ಕೊಡುವ ಭಕ್ತರ ಸ್ನಾನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಭಕ್ತರಿಗೆ ದಾನಿ ಪುಟ್ಟಪ್ಪ ಬ್ರಾಹ್ಮಣರ ಸಂಘದ ಸಹಕಾರದಲ್ಲಿ ಪ್ರಸಾದ ವಿತರಿಸಿದರು. ಸ್ವಯಂ ಸೇವಕರು ಪಾನಕ, ಚಿತ್ರಾನ್ನವನ್ನು ವಿತರಿಸಿದರು.
ಮಾಜಿ ಸಚಿವ ಹಾಗೂ ಕೋಲಾರದ ಶಾಸಕ ವರ್ತೂರು ಪ್ರಕಾಶ್, ತಾಲೂಕಿನ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

