ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕ ಸಂಪಂಗಿ ಚಾಲನೆ
ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಎನ್.ಸಂಪಂಗಿ ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪಕ್ಷದ ಯುವ ಕಾಂಗ್ರೆಸ್ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿದರು.
ಯುವಜನತೆ ರಾಜಕಾರಣದಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸುವ ನಿಟ್ಟಿನಲ್ಲಿ ಪಕ್ಷ ಸದಸ್ಯತ್ವ ನೋಂದಣಿ ಹಮ್ಮಿಕೊಂಡಿದೆ. ದೇಶದಲ್ಲಿ ಜನಪರ ಕಾರ್ಯಗಳಿಂದ ಇತಿಹಾಸ ನಿರ್ಮಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಯುವಜನತೆ ಸದಸ್ಯರಾಗಬೇಕು ಎಂದರು.
ನಂತರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ತಮ್ಮ ಅಧಿಕಾರವಧಿಯಲ್ಲಿ ಕೋಟ್ಯಂತರ ರು.ಗಳ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ನಡೆದಿದೆ. ಬಾಕಿ ಉಳಿದಿರುವ ಕಾಮಗಾರಿ ಹಾಲಿ ಶಾಸಕರು ಯಾವುದೇ ಬದಾಲವಣೆಯಿಲ್ಲದೇ ಯಥಾವತ್ತಾಗಿ ಜಾರಿಗೆ ತರಬೇಕು. ಉದ್ಯೋಗ ಖಾತ್ರಿ ಯೋಜನೆ ಸಮಪರ್ಕವಾಗಿ ಜಾರಿಗೊಳಿಸಿ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಅನ್ನಭಾಗ್ಯ ಯೋಜನೆ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಸಿಗುವ ನಿಟ್ಟಿನಲ್ಲಿ ನಿಗಾ ವಹಿಸುವ ಅವಶ್ಯಕತೆ ಇದೆ. ಗುಡಿಬಂಡೆ ಮತ್ತು ಬಾಗೇಪಲ್ಲಿ ಪಟ್ಟಣಗಳಿಗೆ ಜನತೆಯನ್ನು ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಬರ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿ ವಿಶೇಷ ಕಾರ್ಯಕ್ರಮ ರೂಪಿಸಬೇಕೆಂದು ಅಭಿಪ್ರಾಯಪಟ್ಟರು. ಗ್ರಾಮ ಮಟ್ಟದಲ್ಲಿ ಬೇರೂರಿರುವ ಸಮಸ್ಯೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಅಶ್ವತ್ಥರೆಡ್ಡಿ, ಮುಖಂಡರಾದ ಎಚ್.ನರಸಿಂಹರೆಡ್ಡಿ, ಗುರ್ರಂ ನರಸಿಂಹಯ್ಯ, ಯೋಗೇಶ್ವರಿ ವಿಜಯ್, ಲೋಕಾಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ
ಕಾರ್ಯದರ್ಶಿ ನಂಜುಂಡ, ಜಿ.ಪಂ. ಸದಸ್ಯ ಎಂ.ವಿ. ಕೃಷ್ಣಪ್ಪ, ಪ.ಪಂ. ಸದಸ್ಯರಾದ ರಮೇಶ್, ಚಂದ್ರಶೇಖರ್ ಸೇರಿದಂತೆ ಹಲವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

