ಕೋಲಾರ

ಅದ್ಧೂರಿಯ ಶ್ರೀನಿವಾಸ ಕಲ್ಯಾಣ ಮಹೋತ್ಸವ

Published On :

ಚಿಕ್ಕಬಳ್ಳಾಪುರ:  ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಶ್ರೀಕ್ಷೇತ್ರ ಶ್ರೀನಿವಾಸ ಸಾಗರದ ವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಟ್ರಸ್ಟ್, ತಿರುಮಲ ತಿರುಪತಿ ದೇವಸ್ಥಾನ ವತಿಯಿಂದ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಧಾರ್ಮಿಕ ಸಂಪ್ರದಾಯಗಳೊಂದಿಗೆ ಅದ್ಧೂರಿಯಾಗಿ ನೆರವೇರಿತು.
ಲಕ್ಷಾಂತರ ರು. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಶ್ರೀನಿವಾಸ ಸಾಗರದ ವೆಂಕಟರಮಣಸ್ವಾಮಿ ದೇವಾಲಯದ ವೇದಿಕೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನವನ್ನು ವತಿಯಿಂದ ತೆಗೆದುಕೊಂಡು ಬಂದಿದ್ದ ಉತ್ಸವಮೂರ್ತಿಗಳಿಗೆ ಟಿಟಿಡಿ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಆಗಮಿಕ ಪಂಡಿತರು ಶಾಸ್ತ್ರೋಕ್ತವಾಗಿ ಕಲ್ಯಾಣ ಮಹೋತ್ಸವ ನಡೆಸಿದರು. ಜಿಲ್ಲೆ ಮಾತ್ರವಲ್ಲದೇ ಕೋಲಾರ, ಬೆಂಗಳೂರು, ತುಮಕೂರು ಸೇರಿದಂತೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮ ವೀಕ್ಷಿಸಲು ಆಗಮಿಸಿದ್ದರು. ಸಂಜೆ 6 ಗಂಟೆಯಾಗುತ್ತಿದ್ದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಕೈಗೊಂಡ ಆಗಮಿಕ ಪಂಡಿತರು ರಾತ್ರಿ 9.30 ಗಂಟೆಯವರೆಗೂ ನಡೆಸುತ್ತಿದ್ದ ಕಲ್ಯಾಣ ಮಹೋತ್ಸವದಲ್ಲಿ ಭಕ್ತರು ಲೀನವಾಗಿದ್ದರು. ಭಾಗವಹಿಸಿದ್ದ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಮ್ನು ವತಿಯಿಂದ ತಂದಿದ್ದ ತಿರುಪತಿ ಲಡ್ಡುಗಳನ್ನು ಉಚಿತವಾಗಿ ಹಂಚಲಾಯಿತು.
ಉಚಿತ ವಿವಾಹ:  ಶ್ರೀನಿವಾಸ ಸಾಗರದ ಶ್ರೀವೆಂಕಟರಮಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಪ್ರಯುಕ್ತ 3 ದಿನಗಳ ಕಾರ್ಯಕ್ರಮದ ಕೊನೆ ದಿನವಾದ ಭಾನುವಾರ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.