ಕನ್ನಡ ಅಭಿವೃದ್ಧಿಗೆ ಪ್ರತಿಭಾ ಪುರಸ್ಕಾರ ಪೂರಕ: ಸಂಪಂಗಿ
ಕೆಜಿಎಫ್: ಗಡಿನಾಡು ಕೆಜಿಎಫ್ ಕ್ಷೇತ್ರದಲ್ಲಿ ಕನ್ನಡದ ಅಭಿವೃದ್ಧಿಗಾಗಿ ಪ್ರತಿಭಾ ಪುರಸ್ಕಾರದಂತಹ ಕನ್ನಡ ಪರ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕಿದೆ ಎಂದು ಮಾಜಿ ಶಾಸಕ ವೈ. ಸಂಪಂಗಿ ಹೇಳಿದರು.
ಕನ್ನಡ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ಗಡಿಭಾಗ ಕೆಜಿಎಫ್ ಕ್ಷೇತ್ರದಲ್ಲಿ ಕನ್ನಡ ಅಭಿವೃದ್ಧಿಗೆ ಕನ್ನಡಪರ ಸಂಘಟನೆಗಳು, ಕನ್ನಡ ಸಂಘದ ಮುಖಂಡರು ಪದಾಧಿಕಾರಿಗಳು ಸೇರಿದಂತೆ ಕನ್ನಡ ಅಭಿಮಾನಿಗಳು ಕನ್ನಡ ಭಾಷೆಯನ್ನು ಅಭಿವೃದ್ಧಿ ಪಡಿಸಲು ಪಣತೊಟ್ಟು ಶ್ರಮಿಸಿದ್ದಾರೆ ಎಂದು ತಿಳಿಸಿದರು.
ಹಲವಾರು ಮಕ್ಕಳು ಹಾಗೂ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದರೂ ಅದನ್ನು ಹೊರಗೆ ತರಲು ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ದೇಶದ ಇತರೆ ನೆರೆ ರಾಜ್ಯಗಳಿಂದ ಬರುವ ಅನ್ಯಭಾಷಿಗರನ್ನು ಕರ್ನಾಟಕದ ಜನರು ಹೃತ್ಪೂರ್ವಕವಾಗಿ ಸ್ವಾಗತಿಸಿ ಪ್ರೀತಿ ಮಮತೆಯಿಂದ ಹಾರೈಸುವುದು ಕನ್ನಡಿಗರ ಉತ್ತಮ ಗುಣವಾಗಿದೆ. ಬೇರೆ ರಾಜ್ಯಗಳಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳುತ್ತಾರೆ ಆದರೆ ಕರ್ನಾಟಕ ರಾಜ್ಯದ ಕರ್ಮಭೂಮಿಯಲ್ಲಿ ಎಲ್ಲಾ ರೀತಿಯ ಬೆಳೆಗಳನ್ನು ಬೆಳೆಯಲು ಯೋಗ್ಯತೆ ಪಡೆದ ಭೂಮಿ ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೈ.ಸಂಪಂಗಿ ಸೇರಿದಂತೆ ಕನ್ನಡ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ದೀಪ್ತಿ ಎಂಬ ಬಾಲಕಿಗೆ ಆರ್ಥಿಕ ಸಹಾಯ ಮಾಡಲಾಯಿತು.
ಇದೇ ವೇಳೆ ಜಿಪಂ ಸದಸ್ಯ ನಾರಾಯಣರೆಡ್ಡಿ ಮಾತನಾಡಿ ಈ ಹಿಂದೆ ಗಡಿ ಪ್ರದೇಶದ ಕೆಜಿಎಫ್ ಕ್ಷೇತ್ರದಲ್ಲಿ ಎಲ್ಲವೂ ತಮಿಳು ವಾತಾವರಣ ಉಂಟಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅದು ಮಾಯವಾಗಿ ಕನ್ನಡ ಭಾಷಿಗಳು ಹಾಗೂ ಕನ್ನಡ ಸಂಘಟನೆಗಳು ಮತ್ತು ಕನ್ನಡ ಪರ ಹೋರಾಟಗಾರರಿಂದ ಇಂದು ಕೆಜಿಎಫ್ನಲ್ಲಿ ಕನ್ನಡ ಅಭಿವೃದ್ಧಿಯಾಗಿದೆ ಅದೇ ರೀತಿ ಕೆಜಿಎಫ್ನಲ್ಲಿ ಎಲ್ಲಾ ಭಾಷಿಗರು ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಕನ್ನಡವನ್ನು ಅಭಿವೃದ್ಧಿ ಮಾಡಲು ಎಲ್ಲರೂ ಒಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದರು. ಕನ್ನಡ ಸಂಘವನ್ನು ಪೂರ್ಣಪ್ರಮಾಣದಲ್ಲಿ ಕಟ್ಟಲು ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಅವರಲ್ಲಿ ಮನವಿ ಸಲ್ಲಿಸಲಾಗಿದೆ ಎಂದರು.
ಕೆಜಿಎಫ್ ಕ್ಷೇತ್ರದ ವಿವಿಧ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ವೇದಿಕೆ ಮೇಲೆ ಸನ್ಮಾನಿಸಲಾಯಿತು. ಕೆ.ಆರ್. ಪುರಂ ಬೆಂಗಳೂರಿನ ಹರಿದಾಸ ಸಂಘ ಹ.ರ. ನಾಗರಾಜಾಚಾರ್ಯ ಅವರಿಂದ ನೃತ್ಯ ರೂಪಕ ಮನರಂಜನೆ ಹಾಗೂ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಎಪಿಎಂಸಿ ಮಾಜಿ ಅಧ್ಯಕ್ಷ ವಿಜಯಶಂಕರ್, ಸುಂದರಪಾಳ್ಯ ಗ್ರಾ.ಪಂ. ಮಾಜಿ ಅಧ್ಯಕ್ಷ ಮುನಿಸ್ವಾಮಿರೆಡ್ಡಿ, ಕನ್ನಡ ಸಂಘದ ಅಧ್ಯಕ್ಷ ನರಸಿಂಹೇಗೌಡ ನಾರಣಾಪುರ, ಉಪಾಧ್ಯಕ್ಷ ಪ್ರಸನ್ನರೆಡ್ಡಿ, ಕಾರ್ಯದರ್ಶಿ ಜಯಶಂಕರ್, ಜಂಟಿ ಕಾರ್ಯದರ್ಶಿ ತ್ಯಾಗರಾಜ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರವೆಂಕಟಪ್ಪ, ಪ್ರಧಾನ ಕಾರ್ಯದರ್ಶಿ ದೇಶಪಾಂಡೆ ಕನ್ನಡ ಸಂಘ ಮಾಜಿ ಅಧ್ಯಕ್ಷ ಸುರೇಶ್ಕುಮಾರ್, ವಕೀಲರಾದ ಸುಂದರರಾಮರೆಡ್ಡಿ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

