ದಿನಗೂಲಿ ನೌಕರರ ಕಾಯಂ ಮಾಡಿ
ಕ.ಪ್ರ.ವಾರ್ತೆ ಕೋಲಾರ ಆ.12
ಬಿ.ಎಸ್.ಎನ್.ಎಲ್ನಲ್ಲಿ ಐದು ವರ್ಷಕ್ಕೂ ಮೇಲ್ಪಟ್ಟು ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಸಿಐಟಿಯು ಪ್ರಾಯೋಜಿತ ಕರ್ನಾಟಕ ರಾಜ್ಯ ಬಿಎಸ್ಎನ್ಎಲ್ ದಿನಗೂಲಿ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.
ನಗರದ ಬಿ.ಎಸ್.ಎನ್.ಎಲಲ್ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ನೌಕರರು ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪನವರು ಸಂಘದ ಬೇಡಿಕೆಗಳನ್ನು ಈಡೇರಿಸಲು ಸಂಪರ್ಕ ಇಲಾಖೆಯ ಸಚಿವರ ಮೇಲೆ ಒತ್ತಡವೇರವೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಬಿ.ಎಸ್.ಎನ್.ಎಲ್ನಲ್ಲಿ ಕೆಲಸ ಮಾಡುತ್ತಿರುವ ಎಲ್ಲ ದಿನಗೂಲಿ ಕಾರ್ಮಿಕರನ್ನು ಕಾಯಂಗೊಳಿಸಬೇಕು, ಕೆಲಸಕ್ಕೆ ತಕ್ಕ ವೇತನ ನೀಡಬೇಕು, ಸಾಮಾಜಿಕ ಭದ್ರತೆಯಡಿ ಪಿಎಫ್ ಮತ್ತು ಇಎಸ್ಐ ಸೌಲಭ್ಯ ಕಲ್ಪಿಸಬೇಕು, ಗುತ್ತಿಗೆದಾರರ ಮೂಲಕ ದಿನಗೂಲಿ ನೌಕರರಿಂದ ಕೆಲಸ ಮಾಡಿಸುವುದನ್ನು ತಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪನವರಿಗೆ ಮನವಿ ಪತ್ರ ರವಾನಿಸುವಂತೆ ಕೋರಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ವೆಂಕಟೇಶಮೂರ್ತಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಬಿಎಸ್ಎನ್ಎಲ್ ದಿನಗೂಲಿ ನೌಕರರ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುಳಬಾಗಿಲು ಕೃಷ್ಣಪ್ಪ, ಬಸಂತ ಕುಮಾರ್, ಸುಬ್ರಮಣಿ ಹಾಗೂ ಹರೀಶ್ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

