2 ಗಂಟೆಗೊಮ್ಮೆ ವಿದ್ಯುತ್ ಕಟ್; ಗ್ರಾಹಕರ ಪರದಾಟ
ಕ.ಪ್ರ.ವಾರ್ತೆ ಕೋಲಾರ ಆ.12
ಲಂಗು-ಲಗಾಮು ಇಲ್ಲದೆ ಪ್ರತಿ ಎರಡು ಗಂಟೆಗೊಮ್ಮೆ ವಿದ್ಯುತೆ ಲೋಡ್‌ಶೆಡ್ಡಿಂಗ್ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಗ್ರಾಹಕರು ಹಿಡಿ ಶಾಪ ಹಾಕುತ್ತಿದ್ದಾರೆ.
ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿ ವಿದ್ಯುತ್ ಉತ್ಪಾದನೆ ಆಗುತ್ತಿದ್ದರೂ ಏನೋ ಒಂದು ನೆಪ ಹೇಳಿ ಸರ್ಕಾರ ಗ್ರಾಹಕರನ್ನು ಕತ್ತಲಲ್ಲಿಡುತ್ತಿದೆ ಎಂದು ಆರೋಪಿಸಿದ್ದಾರೆ.
ಎರಡು ಲೋಕಸಭಾ ಕ್ಷೇತ್ರ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ಮತದಾರರ ಓಲೈಕೆಗಾಗಿ ವಿದ್ಯುತ್ ನೀಡಲು ಬೇರೆ ಕಡೆಗಳಿಂದ ವಿದ್ಯುತ್ ಕಬಳಿಕೆ ಮಾಡುತ್ತಿದೆ ಎಂದು ದೂರಿದ್ದಾರೆ.
ಪ್ರತಿದಿನ ಪ್ರತಿ ಎರಡು ಗಂಟೆಗೆ ಒಮ್ಮೆ ಲೋಡ್‌ಶೆಡ್ಡಿಂಗ್ ಮಾಡುವುದರಿಂದ ತೀರಾ ಹಿಂದುಳಿದ ಜಿಲ್ಲೆಯಾದ ಕೋಲಾರ ಮತ್ತು ಇನ್ನಿತರ ಕಡೆ ಕೈಗಾರಿಕೆಗಳಿಗೆ ಸಮಸ್ಯೆ ಆಗುತ್ತದೆ, ವಿದ್ಯಾರ್ಥಿಗಳಿಗೆ ಅನನುಕೂಲವಾಗುತ್ತದೆ, ಅಪರಾಧಗಳ ಸಂಖ್ಯೆ ಹೆಚ್ಚುತ್ತದೆ ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇಂಧನ ಇಲಾಖೆ ನೀಡುವ ಅವೈಜ್ಞಾನಿಕ ಹಾಗೂ ರಾಜಕೀಯ ಪ್ರೇರಿತ ಆದೇಶಗಳನ್ನು ಬೆಸ್ಕಾಂ ಅಧಿಕಾರಿಗಳು ಧಿಕ್ಕರಿಸಬೇಕು, ಗ್ರಾಹಕರಿಂದ ಕೇಳಿ ಬರುವ ನಿಂದನೆ, ಪ್ರತಿಭಟನೆಗಳನ್ನು ಸರ್ಕಾರದ ಗಮನಕ್ಕೆ ತಂದು ಅಸಮರ್ಪಕ ವಿದ್ಯುತ್ ಸಮಸ್ಯೆ ನಿವಾರಿಸಬೇಕೆಂದು ಗ್ರಾಹಕರು ಒತ್ತಾಯಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಮಳೆಯಿಲ್ಲದೆ ರೈತರು ಕಂಗಾಲು ಆಗಿದ್ದಾರೆ, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದೆ. ಜಿಲ್ಲಾ ಆಡಳಿತ ಮತ್ತು ಜನಪ್ರತಿನಿಧಿಗಳು ವಿದ್ಯುತ್ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ದೂರಿರುವ ಗ್ರಾಹಕರು, ರಾಜಕೀಯ ಗೊಂದಲಗಳಿಂದ ಹೊರ ಬಂದು ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದರೆ ಜನವಿರೋಧಿಗಳನ್ನು ಕತ್ತಲ್ಲಿನಲ್ಲಿ ಇಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದೆಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

