'ಭವನದಲ್ಲಿ ನಿವೃತ್ತ ನೌಕರರಿಗೂ ಪ್ರತ್ಯೇಕ ಕೊಠಡಿ ವ್ಯವಸ್ಥೆ'
ಚಿಂತಾಮಣಿ: ಪಟ್ಟಣದಲ್ಲಿ ನಿರ್ಮಾಣಗೊಳ್ಳಲಿರುವ ಸರ್ಕಾರಿ ನೌಕರರ ಸಂಘದ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೂ 1 ಕೊಠಡಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಬಿ.ಜನಾರ್ದನರೆಡ್ಡಿ ತಿಳಿಸಿದರು.
ಇಲ್ಲಿನ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನಲ್ಲಿ ನಡೆದ ನಿವೃತ್ತ ಸರ್ಕಾರಿ ನೌಕರರ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಸರ್ಕಾರಿ ನೌಕರರ ಭವನದ ನಿರ್ಮಾಣ ಕಾರ್ಯ ಅತೀ ಶೀಘ್ರದಲ್ಲೇ ಪ್ರಾರಂಭಿಸಲಿದೆ. ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ನಿವೃತ್ತ ನೌಕರರ ಸಂಘ ತನ್ನ ಕಾರ್ಯ ಚಟುವಟಿಕೆ ನಡೆಸುವುದಕ್ಕಾಗಿ ಕೊಠಡಿ ವ್ಯವಸ್ಥೆ ಮಾಡಿಕೊಡುವುದಾಗಿ ನುಡಿದರಲ್ಲದೆ, ಅದುವರೆವಿಗೂ ನಿವೃತ್ತ ನೌಕರರಿಗೆ ಗುರುಭವನದಲ್ಲಿ ತಾತ್ಕಾಲಿಕವಾಗಿ ಕೊಠಡಿ ನೀಡಲಾಗುವುದೆಂದು ಆಶ್ವಾಸನೆ ನೀಡಿದರು.
ಹಿರಿಯ ನಿವೃತ್ತ ಶಿಕ್ಷಕ ರೆಡ್ಡೆಪ್ಪಾಚಾರ್, ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ. ವರದರಾಜನ್ ಅಪ್ಪಿರೆಡ್ಡಿ, ಸಿ.ವಿ.ಸತ್ಯಕೀರ್ತಿ, ವೆಂಕಟರಮಣ ಮಾತನಾಡಿದರು. ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ಜನಾರ್ದನರೆಡ್ಡಿ ಅವರನ್ನು ನಿವೃತ್ತ ನೌಕರರ ಸಂಘದ ಪರವಾಗಿ ಸನ್ಮಾನಿಸಲಾಯಿತು. ಕಾಗತಿ ವಿ.ವೆಂಕಟರತ್ನಂ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

