'ರಕ್ತದಾನ ಎಲ್ಲ ದಾನಕ್ಕಿಂತ ಶ್ರೇಷ್ಠ'
ಶಿಡ್ಲಘಟ್ಟ: ಎಲ್ಲ ದಾನಕ್ಕಿಂತ ಶ್ರೇಷ್ಠವಾದದ್ದು ರಕ್ತದಾನ. ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ರಕ್ತ ಸಿಗುವುದರಿಂದ ರೋಗಿಗಳ ಪ್ರಾಣ ಉಳಿಯುತ್ತದೆ ಎಂದು ಶಾಸಕ ರಾಜಣ್ಣ ಹೇಳಿದರು.
66ನೇ ವರ್ಷದ ಸ್ವಾತಂತ್ರೋತ್ಸವ ಪ್ರಯುಕ್ತ ಪಟ್ಟಣದ ಲಕ್ಷೀವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದಲ್ಲಿ ಬಡತನ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿದ್ದು, ಬಡತನಕ್ಕೆ ಮುಖ್ಯ ಕಾರಣ ನಿರುದ್ಯೋಗ. ದುಡಿಯುವ ಕೈಗಳಿಗೆ ಉದ್ಯೋಗ ಸಿಕ್ಕರೆ ಬಹಳಷ್ಟು ಬಡತನ ನಿವಾರಣೆಯಾಗುತ್ತದೆ. ಅದಕ್ಕಾಗಿ ಎಲ್ಲರೂ ವಿದ್ಯಾವಂತರಾಗಬೇಕು ಎಂದು ತಿಳಿಸಿದರು. ಯುವಶಕ್ತಿ ವಿದ್ಯಾವಂತರಾಗುವುದರಿಂದ ಜವಾಬ್ದಾರಿ ಅರಿತು ದೇಶಕ್ಕೆ ತನ್ನದೇ ಆದ ಸೇವೆ ಸಲ್ಲಿಸಬೇಕು. ಇಂದು ನಡೆಯುತ್ತಿರುವ ರಕ್ತದಾನ ಶಿಬಿರದಲ್ಲಿ ಯುವಕರು ಮುಂದೆ ಬಂದು ರಕ್ತದಾನ ಮಾಡಿ ರೋಗಿಗಳ ಪ್ರಾಣ ಉಳಿಸಬೇಕೆಂದು ಹೇಳಿದರು.
ಇದೇ ವೇಳೆ ಸ್ವಾತಂತ್ರ್ಯ ಹೋರಟಗಾರ ಡಿ.ಮಾರಪ್ಪನ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣಸ್ವಾಮಿ, ಡಾ.ಸತ್ಯ ನಾರಾಯಣರಾವ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಶಿಡ್ಲಘಟ್ಟ ಶಾಖೆಯ ಕಾರ್ಯದರ್ಶಿ ಗುರುರಾಜ್, ಶ್ರೀ ಲಕ್ಷೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಅಧ್ಯಕ್ಷ ಬೂದಾಳ ರವಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಡಿ.ಮಾರಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

