ಸೂಕ್ತ ಬಸ್ ಸಂಚಾರ ವ್ಯವಸ್ಥೆಗೆ ಒತ್ತಾಯ
ಚಿಂತಾಮಣಿ: ಚಿಂತಾಮಣಿ ಕೆಎಸ್ಆರ್ಟಿಸಿ ಘಟಕಕ್ಕೆ ಸೇರಿದ ಮಾರ್ಗದ ಸಂಖ್ಯೆ 52ರ ಬಸ್ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಆದರೆ, ಇದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು, ವರ್ತಕರಿಗೆ ಸಂಚರಿಸಲು ತೀವ್ರ ತೊಂದರೆಯಾಗಿದೆ ಎಂದು ಮೈಲಾಂಡ್ಲಹಳ್ಳಿ ಕನ್ನಡ ಸೇನೆ ಮತ್ತು ಚಿಂತಾಮಣಿಯ ಕರ್ನಾಟಕ ಮುಸ್ಲಿಂ ಹಿತರಕ್ಷಣಾ ವೇದಿಕೆ ಘಟಕದಿಂದ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ಶಾಂತಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಚಿಂತಾಮಣಿಯಿಂದ ಕುರುಬೂರು ಗ್ರಾಮಕ್ಕೆ ಬೆಳಿಗ್ಗೆ 8 ಗಂಟೆಗೆ ಕಾಚಹಳ್ಳಿ, ಗಡದಾಸನಹಳ್ಳಿ, ಯಡಹಳ್ಳಿ, ಕೂತರಾಜನಹಳ್ಳಿ, ಗಾಜಲಹಳ್ಳಿ ಮಾರ್ಗವಾಗಿ ಬಂದು ಮತ್ತೆ ಕುರುಬೂರಿನಿಂದ ಚಿಂತಾಮಣಿ ಮಾರ್ಗವಾಗಿ ಸಂಚರಿಸುತ್ತಿದೆ. ಈ ಮಾರ್ಗದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಇತರರಿಗೆ ಅನುಕೂಲವಾಗುತ್ತಿತ್ತು. ಆದರೆ, ಈ ಬಸ್ ಮಾರ್ಗ ಅನವಶ್ಯಕವಾಗಿ ಬದಲಾಯಿಸಿರುವುದರಿಂದ ಎಲ್ಲರಿಗೂ ತೀವ್ರ ತೊಂದರೆಯಾಗುತ್ತಿದೆ ಎಂದರು. ಮನವಿಗೆ ಸ್ಪಂದಿಸಿದ ವ್ಯವಸ್ಥಾಪಕರರು, ಈ ಸಂಬಂಧದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸದರಿ ಮಾರ್ಗಗಳಲ್ಲಿಯೇ ಬಸ್ ಸಂಚರಿಸಲು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. ಉಭಯ ವೇದಿಕೆಗಳ ಪದಾಧಿಕಾರಿಗಳಾದ ಎಂ.ಡಿ. ಖಾಜಾ ಹುಸೇನ್, ಇಮ್ರಾನ್ ಪಾಷಾ,ನದೀಮ ನಯಾಜ್, ಷಫಿಉಲ್ಲಾ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

