ಕೇಂದ್ರ ಸರ್ಕಾರ ವಿರುದ್ಧ ಎಬಿವಿಪಿ ಪ್ರತಿಭಟನೆ
ಕೋಲಾರ: ಭ್ರಷ್ಟಾಚಾರದಲ್ಲಿ ಮುಳುಗಿರುವ ಕೇಂದ್ರದ ಯುಪಿಎ ಸರ್ಕಾರನ್ನು ತಕ್ಷಣ ವಜಾ ಮಾಡುವಂತೆ ಒತ್ತಾಯಿಸಿ ನಗರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ ಮಂಗಳವಾರ ಪ್ರತಿಭಟನೆ ನಡೆಯಿತು. ನಗರದ ನೂತನ ಪದವಿ ಪೂರ್ವ ಕಾಲೇಜಿನಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿದ ಕಾರ್ಯಕರ್ತರು ಕೆಲ ನಿಮಿಷ ಧರಣಿ ನಡೆಸಿ ನಂತರ ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರಿಗೆ ಮನವಿ ಸಲ್ಲಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡುವಂತೆ ಕೋರಿದರು. ಕೇಂದ್ರದ ಯುಪಿಎ ಸರ್ಕಾರ ಹಲವು ಹಗರಣಗಳ ಮೂಲಕ ಸುಮಾರು 12 ಲಕ್ಷ ಕೋಟಿ ರು.ಗೂ ಮೀರಿ ಭ್ರಷ್ಟಾಚಾರವೆಸಗಿದೆ. ಹಣದುಬ್ಬರ ಮತ್ತು ಬೆಲೆ ಏರಿಕೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲಗೊಂಡಿದೆ ಎಂದು ಮುಖಂಡರು ಆರೋಪಿಸಿದರು. ಎಬಿವಿಪಿ ಜಿಲ್ಲಾ ಸಂಚಾಲಕ ಸುನೀಲ್ಕುಮಾರ್, ನಗರ ಸಂಘಟನಾ ಕಾರ್ಯದರ್ಶಿ ಚೇತನ್, ಜಿಲ್ಲಾ ಪ್ರಮುಖ್ ಪುನೀತ್ಕುಮಾರ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

