ಕುಡಿವ ನೀರಿಗಾಗಿ ರೈತ ಸಂಘದಿಂದ ಧರಣಿ
ಕೋಲಾರ: ಜಿಲ್ಲೆಯ ಜನತೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಬುಧವಾರ ಧರಣಿ ನಡೆಯಿತು.
ನಗರದ ಮಹಾತ್ಮಗಾಂಧಿ ಪ್ರತಿಮೆ ಬಳಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ತ್ವರಿತವಾಗಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ತರುವ ಮೂಲಕ ಜನತೆಯ ಪ್ರಾಣ ರಕ್ಷಣೆ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ವಿದರ್ಭ ಮಾದರಿ ಪ್ಯಾಕೇಜ್ ಘೋಷಿಸಿ: 15 ವರ್ಷಗಳ ಕಾಲ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಸರ್ಕಾರ ಘೋಷಣೆ ಮಾಡಿ ವಿದರ್ಭ ಮಾದರಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಹೆಚ್ಚು ತರಕಾರಿ ಮತ್ತು ವಾಣಿಜ್ಯ ಬೆಳೆಗಳು ಬೆಳೆಯುವ ಈ ಜಿಲ್ಲೆಯಲ್ಲಿ ರೈತರ ನೆರವಿಗೆ ಬರಬೇಕಾಗಿದ್ದ ಕೃಷಿ ಇಲಾಖೆ ಖಾಸಗಿ ಬೀಜ ಕಂಪನಿಗಳು ಮತ್ತು ಖಾಸಗಿ ಕೀಟನಾಶಕಗಳ ಕಂಪನಿಗಳು ನಕಲಿ ಔಷಧಿಯಿಂದ ಮಾರಾಟ ಮಾಡುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲವಾದ್ದರಿಂದ ಸದರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಕೋರಿದರು.
ಜಿಲ್ಲೆಯ ಎಲ್ಲಾ ಕೆರೆಗಳಲ್ಲಿ ಸರ್ಕಾರ ಕೂಡಲೇ ಹೂಳೆತ್ತಲು ಮುಂದಾಗಬೇಕು, ಭೂಗಳ್ಳರಿಂದ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು. ಕೆರೆಗಳಲ್ಲಿ ಅಕ್ರಮ ಮರಳುಗಣಿಗಾರಿಕೆ, ಕ್ರಷರ್ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ಜಿಲ್ಲಾ ಸಂಚಾಲಕ ಕೆ. ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ನಾರಾಯಣಗೌಡ, ಮುಖಂಡರಾದ ಬಂಗೋದಿ ನಾಗರಾಜ್ಗೌಡ, ರಂಜಿತ್ಕುಮಾರ್, ಹೂಹಳ್ಳಿ ನಾಗರಾಜ್, ಸಾಗರ್, ತರ್ನಹಳ್ಳಿ ವೆಂಕಿ, ಆಂಜಿನಪ್ಪ, ನಿಲಕಂಠಪುರ ಮುನೇಗೌಡ, ಮುರಾಂಡಹಳ್ಳಿ ಶಿವಾರೆಡ್ಡಿ, ಈಕಂಬಳ್ಳಿ ಮಂಜುನಾಥ್, ಐತಂಡಹಳ್ಳಿ ಉದಯ್, ಹೆಬ್ಬಣಿ ಆನಂದ್, ಮಾಸ್ತಿ ಬಾಬು, ಅವಲಪ್ಪ, ಕೆಂಬೋಡಿ ಕೃಷ್ಣೇಗೌಡ ಮತ್ತಿತರರು ಪ್ರತಿಭಟನೆ ನೇತೃತ್ವವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

