'ಕೆಜಿಎಫ್‌ನಲ್ಲಿ ಮಲ ಹೊರುವ ಪದ್ಧತಿ ನಿರ್ನಾಮ'
ಕ.ಪ್ರ.ವಾರ್ತೆ, ಕೆಜಿಎಫ್, ಆ.14
ಮಲ ಹೊರುವ ಪದ್ಧತಿ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಕರ್ತವ್ಯಪ್ರಜ್ಞೆ ತೃಪ್ತಿ ತಂದಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು.
ಇಲ್ಲಿನ ಬೆಮೆಲ್ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜಿಎಫ್‌ನಲ್ಲಿ ಸೇರಿದಂತೆ ರಾಜ್ಯದಲ್ಲಿ ಇತರೇ ಜಿಲ್ಲೆಗಳಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿತ್ತು. ಈ ಹಿನ್ನೆಲೆಯಲ್ಲಿ 1993ರಲ್ಲಿ ಮಲ ಹೊರುವ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಈ ಅನುಮೋದನೆ ಕಾರ್ಯರೂಪಕ್ಕೆ ತರಲು ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ವಿಫಲರಾಗಿದ್ದರು ಎಂದು ತಿಳಿಸಿದರು.
ಕೆಜಿಎಫ್‌ನಲ್ಲಿ ಮಲ ಹೊರುವ ಪದ್ಧತಿ ಜೀವಂತ ಇರುವುದಾಗಿ ಹಲವಾರು ದೂರುಗಳು ಮಾಹಿತಿಗಳು ಬಂದಿರುವ ಹಿನ್ನೆಲೆಯಲ್ಲಿ ತಾವು ಕೆಜಿಎಫ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಕೆಜಿಎಫ್‌ನಲ್ಲಿ ಮಲ ಹೊರುವ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಿದೆ. ಆದರ ರಾಜ್ಯದ ಇತರೇ ಕೆಲ ಜಿಲ್ಲೆಗಳಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಇಂತಹ ಪ್ರದೇಶಗಳಲ್ಲಿ ಈ ಪದ್ಧತಿ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿರುವುದಾಗಿ ತಿಳಿಸಿದರು.
ಕೆಜಿಎಫ್‌ನ ಕೆನಡೀಸ್ ಆಂಧ್ರ ಕಾಲೋನಿಗೆ ತಮ್ಮ ಆಯೋಗ ಭೇಟಿ ನೀಡಿ ಪರಿಶೀಲಿಸಿದಾಗ ಮಲ ಹೊರುವ ಕೆಲಸವನ್ನು ಯಾರೂ ಮಾಡುತ್ತಿಲ್ಲ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಆದರೆ, ಈ ಬಡಾವಣೆಯ ನಿವಾಸಿಗಳ ಮೊಗದಲ್ಲಿ ಬೇಸರ ಎದ್ದು ಕಾಣುತ್ತಿತ್ತು. ಇದಕ್ಕೆ ಕಾರಣ ಈ ಪದ್ಧತಿಯಲ್ಲಿ ತೊಡಗಿದ್ದವರಿಗೆ ಸರ್ಕಾರದಿಂತ ಪರ್ಯಾಯ ಯೋಜನೆಗಳನ್ನು ಜಾರಿಗೊಳಿಸದಿರುವುದು ಎಂದರು.
ಕೆಜಿಎಫ್‌ನಲ್ಲಿ ಸುಮಾರು 145 ಮಂದಿ ಸಫಾಯಿ ಕರ್ಮಚಾರಿಗಳಿದ್ದಾರೆ. ಅವರಿಗೆ ಈಗಾಗಲೇ 60 ಮಂದಿಗೆ ನಗರಸಭೆಯಲ್ಲಿ ತಾತ್ಕಾಲಿಕ ಕೆಲಸ ನೀಡಲಾಗಿದೆ. ಉಳಿದ ಇತರರಿಗೆ ಉದ್ಯೋಗ ಕಲ್ಪಿಸಿಕೊಡಲು ಸರ್ಕಾರಕ್ಕೆ ಮತ್ತು ಜಿಲ್ಲಾಧಿಕಾರಿಗೆ ತಿಳಿಸಲಾಗುವುದು. ಸಫಾಯಿ ಕರ್ಮಚಾರಿಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪುನರ್‌ವಸತಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡು ಈ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅದೇ ರೀತಿ ಪ್ರಸಕ್ತ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಫಾಯಿ ಕರ್ಮಚಾರಿಗಳ ಕುಟುಂಬದ ಪುರ್ನವಸತಿ ಪರ್ಯಾಯ ಯೋಜನೆ ರೂಪಿಸಲು ಸಫಾಯಿ ಕರ್ಮಚಾರಿ ಕಾಯ್ದೆ ಹಾಗೂ ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕಾನೂನು ರೂಪಿಸಲು ನೂತನ ಬಿಲ್ ಮಂಡಿಸಲು ಸಿದ್ಧತೆ ಮಾಡಿದೆ ಎಂದರು.ಮಲ ಹೊರುವ ಪದ್ಧತಿಯಲ್ಲಿ ತೊಡಗಿರುವವರ ಮಾಹಿತಿ ಸೇರಿದಂತೆ ಇತರೆ ಹಲವು ಮಾಹಿತಿಗಳ ಮೂಲಕ ಸಫಾಯಿ ಕರ್ಮಚಾರಿಗಳ ಪರಿಸ್ಥಿತಿಯ ವರದಿ ಸಿದ್ಧವಾಗುತ್ತಿದೆ. ಆದರೆ, ಕೆಲವು ಲೋಪದೋಷಗಳ ಹಿನ್ನೆಲೆಯಲ್ಲಿ ಮರು ಸಮೀಕ್ಷೆ ಹಾಗೂ ಸರ್ವೆ ನಡೆಸಲು ಸರ್ಕಾರ ಆದೇಶ ನೀಡಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಕೆ.ಬಿ. ಕೃಷ್ಣಮೂರ್ತಿ ತಿಳಿಸಿದರು.
ಪೌರಾಡಳಿತ ನಿರ್ದೇಶನಾಲಯದ ಅಭಿಯಂತರ ಶ್ರೀಪ್ರಕಾಶ್, ಉಪವಿಭಾಗಾಧಿಕಾರಿ ಆಯೆಷಾ ಪರ್ವೀನ್, ಪೊಲೀಸ್ ರಕ್ಷಣಾಧಿಕಾರಿ ಡಾ.ರೋಹಿಣಿ ಕಟೋಚ್ ಸಫೆಟ್, ಯೋಜನಾ ನಿರ್ದೇಶಕರಾದ ಸರ್ವರ್ ಮರ್ಚೆಂಟ್, ನಗರಸಭಾ ಆಯುಕ್ತ ವಿ.ಬಾಲಚಂದರ್, ಸೇರಿದಂತೆ ಇತರೇ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

