ರಸ್ತೆ ವಿವಾದ: ಶಾಸಕರಿಂದ ಮುಕ್ತಿ
ಕೋಲಾರ: ತಾಲೂಕಿನ ಮಾರ್ಕಂಡಪುರ ಗ್ರಾಮದಲ್ಲಿ ಕಳೆದ ಕೆಲವು ವರ್ಷಗಳಿಂದ ವಿವಾದಕ್ಕೆ ಸಿಲುಕಿದ್ದ ರಸ್ತೆ ನಿರ್ಮಾಣ ಕಾಮಗಾರಿ ಸಂಬಂಧಿಸಿ ವ್ಯಾಜ್ಯವನ್ನು ಶಾಸಕ ವರ್ತೂರು ಪ್ರಕಾಶ್ ಬಗೆಹರಿಸಿದರು.
ಈ ನಿಟ್ಟಿನಲ್ಲಿ ಜಮೀನಿನ ಮಾಲೀಕರ ಸಮ್ಮುಖದಲ್ಲಿ ಮಾತುಕತೆ ನಡೆಸಿದ ಶಾಸಕ ವರ್ತೂರು ಪ್ರಕಾಶ್ ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಸಹಕರಿಸುವಂತೆ ಮನವಿ ಮಾಡಿ ಅವರ ಮನವೊಲಿಸಿ ಗ್ರಾಮಕ್ಕೆ ಸಮರ್ಪಕ ರಸ್ತೆ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾದರು.
ಏನದು ವಿವಾದ: ಗ್ರಾಮದಲ್ಲಿ ರಸ್ತೆ ಕಿರಿದಾಗಿದ್ದರಿಂದ ಸುಗಮ ಸಂಚಾರ ವ್ಯವಸ್ಥೆಗೆ ಅಡ್ಡಿಯುಂಟಾಗಿತ್ತು. ಈ ವಿಚಾರವಾಗಿ ಗ್ರಾಮಸ್ಥರು ಶಾಸಕರ ಬಳಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ರಸ್ತೆ ಪಕ್ಕದಲ್ಲಿದ್ದ ಜಮೀನು ಮಾಲೀಕರ ಜೊತೆ ಚರ್ಚಿಸಿ ಗ್ರಾಮದ ಏಳಿಗೆ ದೃಷ್ಟಿಯಿಂದ ಸ್ಥಳ ಬಿಟ್ಟುಕೊಡುವಂತೆ ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಮಾಲೀಕರು ತಮಗೆ ಪರಿಹಾರ ನೀಡಿದರೆ ರಸ್ತೆಗೆ ಜಾಗ ಬಿಟ್ಟುಕೊಡುವುದಾಗಿ ತಿಳಿಸಿದಾಗ ಶಾಸಕರು ಸಮ್ಮತಿಸಿ ಕೂಡಲೇ ಜೆಸಿಬಿಗಳನ್ನು ಸ್ಥಳಕ್ಕೆ ಕರೆಯಿಸಿ ರಸ್ತೆಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶೆಡ್ನ್ನು ತೆರವುಗೊಳಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ವಕ್ಕಲೇರಿ ಚಲಪತಿ, ತಂಬಿಹಳ್ಳಿ ಮುನಿಯಪ್ಪ, ಗ್ರಾಪಂ ಸದಸ್ಯ ರಾಘವೇಂದ್ರ, ಮುರಳಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

