ತಾಪಂ ಕಡೆಗಣನೆ: ಪ್ರತಿಭಟನೆಗೆ ಸಜ್ಜು
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ವತಿಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆ.15 ರಂದು ಬೆಳಗ್ಗೆ 9 ಗಂಟೆಗೆ 67ನೇ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದ್ದು ಈ ನಡುವೆ ಜಿಲ್ಲಾಡಳಿತದ ವತಿಯಿಂದ ಮುದ್ರಿಸಲಾಗಿರುವ ಆಹ್ವಾನ ಪತ್ರಿಕೆಯಲ್ಲಿ ತಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹೆಸರನ್ನು ಪ್ರಕಟಿಸದಿರುವುದನ್ನು ಖಂಡಿಸಿ ತಾಪಂ ಸದಸ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಬಾರಿ ಸಂಪ್ರದಾಯ ಮುರಿಯಲಾಗಿದೆ. ತಾಪಂ ಪ್ರಸ್ತಾಪವೇ ಆಹ್ವಾನ ಪತ್ರಿಕೆಯಲಿಲ್ಲ ಎಂದು ತಾಪಂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಭಟಿಸಲಾಗುವುದು ತಾಪಂ ಸದಸ್ಯರು ತಿಳಿಸಿದ್ದಾರೆ.
ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಇರಲಿ
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲಾ -ಕಾಲೇಜುಗಳು ಖಾಸಗಿ ಶಾಲಾ -ಕಾಲೇಜುಗಳಿಗೆ ಪೈಪೋಟಿಯಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂದು ಶಾಸಕ ಡಾ. ಕೆ.ಸುಧಾಕರ್ ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಎಸ್ಡಿಎಂಸಿ ನೂತನ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಗುಣಮಟ್ಟದ ಕೊರತೆ, ಮೂಲ ಸೌಕರ್ಯಗಳ ಸಮಸ್ಯೆಯಿಂದ ಸರ್ಕಾರಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ವಿಫಲವಾಗುತ್ತಿವೆ. ಈ ಮೂಲಕ ಖಾಸಗಿ ಶಾಲಾ ಕಾಲೇಜುಗಳ ಹಾವಳಿಗೆ ಸರ್ಕಾರಿ ಶಾಲಾ -ಕಾಲೇಜುಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಖಾಸಗಿ ಶಾಲಾ -ಕಾಲೇಜುಗಳಿಗೆ ಪೈಪೋಟಿಯಾಗಿ ಶಿಕ್ಷಣ ನೀಡಿ ಸರ್ಕಾರಿ ಶಾಲಾ -ಕಾಲೇಜುಗಳ ಶಿಕ್ಷಕರು ತಮ್ಮ ಸಾಮರ್ಥ್ಯ, ಮಹತ್ವ ಏನೆಂಬುದನ್ನು ತೋರಿಸಬೇಕೆಂದು ಸಲಹೆ ನೀಡಿದರು.
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಶಿಕ್ಷಣ ತಜ್ಞರಿಂದ ಉಪನ್ಯಾಸ, ವಿಚಾರ ಸಂಕಿರಣ, ಕಾರ್ಯಾಗಾರ ಮತ್ತಿತರ ಗುಣಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಸೇವಾ ಮನೋಭಾವವಿರುವ ಕಾರ್ಪೋರೇಟ್ ಸಂಸ್ಥೆಗಳು ಹಾಗೂ ಹಳೆಯ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಈ ಮೂಲಕ ತಾಲೂಕಿನಲ್ಲಿ ಮಾದರಿ ಕಾಲೇಜನ್ನಾಗಿ ಜೂನಿಯರ್ ಕಾಲೇಜನ್ನು ರೂಪಿಸುತ್ತೇನೆ ಎಂದರು.
ಕಾಲೇಜಿನ ಉಪನ್ಯಾಕರ ಕೊರತೆ ನಿವಾರಣೆ, ವಿದ್ಯಾರ್ಥಿನಿಯರಿಗಾಗಿ ಹೆಚ್ಚುವರಿ ಶೌಚಾಲಯ ನಿರ್ಮಾಣ, ಅಗತ್ಯ ಮೂಲ ಸೌಕರ್ಯಗಳ ವೃದ್ಧಿ ಕುರಿತು ಚರ್ಚಿಸಿದ ಶಾಸಕರು, ಕಾಲೇಜಿನಲ್ಲಿ ಶುದ್ಧ ಕುಡಿವ ನೀರು ಘಟಕ ಸ್ಥಾಪಿಸುವುದಾಗಿ ಭರವಸೆ ನೀಡಿದರು.
ಶತಮಾನದ ಇತಿಹಾಸವುಳ್ಳ ಶಿಕ್ಷಣ ಸಂಸ್ಥೆ ಕಟ್ಟಡದ ಕೆಲ ಭಾಗ ಶಿಥಿಲಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಎಸ್ಡಿಎಂಸಿ ಉಪಾಧ್ಯಕ್ಷ ಅರೂರು ಪ್ರಕಾಶ್ ಮಾತನಾಡಿದರು. ಎಸ್ಡಿಎಂಸಿ ಖಜಾಂಚಿ ರಾಮಕುಮಾರ್, ನೂತನ ಸದಸ್ಯರಾದ ಸುಮಿತ್ರಮ್ಮ, ಆರ್.ಕೆ. ಪ್ರದೀಪ್, ಮಹೇಶ್, ಮನೋಹರ್ ಬಾಬು, ಬಿ.ವಿ. ಕೋಂಡಪ್ಪ, ಗಂಗರಾಜು, ಸೈಯದ್ ಇರ್ಫಾನ್ ಆಲಂ, ನಗರಸಭಾ ಸದಸ್ಯರಾದ ಗಜೇಂದ್ರ, ಸುಬ್ರಹ್ಮಣ್ಯಾಚಾರ್, ವೆಂಕಟೇಶ್, ಪ್ರಾಂಶುಪಾಲ ಸಂಪತ್ಕುಮಾರ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

