ಧ್ವಜಾರೋಹಣ ನೆರವೇರಿಸಿ ಸಚಿವ ಖಾದರ್ ಗೌರವ ವಂದನೆ ಸ್ವೀಕಾರ
ಕೋಲಾರ: ಜಿಲ್ಲಾ ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಗುರುವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 67ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಸಡಗರ ಸಂಭ್ರಮದಿಂದ ನಡೆಯಿತು.
ನಭೋ ಮಂಡಲದಲ್ಲಿ ಮೋಡಗಳ ಚಿತ್ತಾರ, ಕಳೆದ ರಾತ್ರಿ ಸುರಿದ ಮಳೆಯಿಂದಾಗಿ ಕ್ರೀಡಾಂಗಣದಲ್ಲಿ ಕಂಡ ತಣ್ಣನೆ ವಾತಾವರಣ, ಶಾಲಾ ಮಕ್ಕಳು, ಪೊಲೀಸರು, ಗೃಹ ರಕ್ಷಕ ದಳ ಮತ್ತು ಎನ್ಸಿಸಿ ತಂಡಗಳ ಪಥ ಸಂಚಲನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಣಿಯವಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು, ನಾಗರಿಕರ ಹಾಜರಾತಿ ವಿರಳವಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ನಂತರ ಗೌರವ ರಕ್ಷೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸದ ಸಂದೇಶವನ್ನು ಓದಿದರು.
ಡಿಸಿ ವರ್ಗಾವಣೆಯಿಂದಾಗಿ ಈ ಬಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಶಾಸಕ ವರ್ತೂರ್ ಪ್ರಕಾಶ್ ಗೈರು ಎದ್ದು ಕಾಣುತ್ತಿತ್ತು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಕಾರ್ಯಕ್ರಮ ಅರ್ಧದಲ್ಲೇ ನಿರ್ಗಮಿಸಿದರು.
ಒಟ್ಟು 29 ತಂಡ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ಈ ಬಾರಿ ಅಂತರಗಂಗೆ ವಿದ್ಯಾ ಸಂಸ್ಥೆಯ ಬುದ್ಧಿಮಾಂದ್ಯ ಮಕ್ಕಳು ಪಥ ಸಂಚಲನದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸಂಜೆ ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಾಗೂ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

