10ಲಕ್ಷ ದೇಣಿಗೆ: ತನಿಖೆ ನಂತರ ಕ್ರಮ
ಕೋಲಾರ: ಸ್ವಾತಂತ್ರ್ಯೋತ್ಸವ ಸಮಾರಂಭಕ್ಕಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ನಗರಸಭೆಯಿಂದ 10 ಲಕ್ಷ ರು. ದೇಣಿಗೆ ಚೆಕ್ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭರವಸೆ ನೀಡಿದರು.
ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿನ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸ್ವಾತಂತ್ರ್ಯೋತ್ಸವ ಆಚರಣೆಗೆ ನಗರಸಭೆಯಿಂದ ನೀಡಿರುವ 10 ಲಕ್ಷ ರು.ಗಳ ದೇಣಿಯ ವಿಚಾರ ಪ್ರತಿಧ್ವನಿಸಿದಾಗ ಅಚ್ಚರಿ ವ್ಯಕ್ತಪಡಿಸಿದ ಸಚಿವರು, ಕೂಡಲೇ ತನಿಖೆ ಕೈಗೊಂಡು ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ. ವೆಂಕಟೇಶಮೂರ್ತಿ ಅವರಿಗೆ ಸೂಚಿಸಿದರು.
ಶೇ.22.75 ಅನುದಾನವನ್ನು ದಲಿತರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು, ಬೇರೆ ಯಾವುದೇ ಉದ್ದೇಶಗಳಿಗೆ ಹಣ ವರ್ಗಾವಣೆ ಮಾಡುವಂತಿಲ್ಲ. ಆದರೆ ನಗರಸಭೆ ಆಯುಕ್ತರು ಇಷ್ಟೊಂದು ದೊಡ್ಡ ಮೊತ್ತದ ದೇಣಿಗೆ ನೀಡಿದ್ದು ಏಕೆ ಎಂಬುದು ಜನರಿಗೆ ತಿಳಿಯಬೇಕೆಂದು ಪತ್ರಕರ್ತರು ಹೇಳಿದಾಗ, ಸಚಿವರು ಸ್ಥಳದಲ್ಲಿದ್ದ ನಗರಸಭೆ ಆಯುಕ್ತ ಮಹೇಂದ್ರ ಕುಮಾರ್ ಅವರಿಗೆ ಏಕೆ ಇಷ್ಟು ದೊಡ್ಡ ಮೊತ್ತದ ದೇಣಿಗೆ ನೀಡಿದ್ದೀರಾ ಎಂದು ಪ್ರಶ್ನಿಸಿದರು.
ದೇಣಿಗೆ ನೀಡಲು ಅವಕಾಶವಿಲ್ಲವೆಂದು ತಾವು ಹೇಳಿದರೂ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಲಿಲ್ಲ, ದೇಣಿಗೆ ನೀಡುವಂತೆ ಕೇಳಿದರು. ಚೆಕ್ ನೀಡಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡ ಅಧಿಕಾರಿ, ತಾವು ನೀಡಿದ ಚೆಕ್ವಾಪಸ್ ಬಂದಿದೆ ಎಂದರು. ಚೆಕ್ ವಾಪಸ್ ಬಂದಿರಬಹುದು. ಆದರೆ, ಇಷ್ಟು ದೊಡ್ಡ ಮೊತ್ತದ ದೇಣಿಗೆ ನೀಡಿದ್ದು ಏಕೆ ಎಂದು ಪ್ರಶ್ನಿಸಿದ ಸಚಿವರು, ತನಿಖೆ ನಡೆದಲ್ಲಿ ಎಲ್ಲವೂ ಗೊತ್ತಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

