ಕೋಲಾರ

ಜಾತೀಯತೆ ತಾಂಡವ: ವಿಷಾದ

Published On :

ಶ್ರೀನಿವಾಸಪುರ: ದೇಶದಲ್ಲಿ ಜಾತಿ ವ್ಯಾಮೋಹದಿಂದಾಗಿ ಜಾತೀಯತೆ
ತಾಂಡವವಾಡುತ್ತಿದೆ ಎಂದು ಆರಿಕುಂಟೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಜಿ.ಕೆ.ಶ್ರೀನಿವಾಸ ಬೇಸರ  ವ್ಯಕ್ತಪಡಿಸಿದರು.
ಸಮಾಜ ಸೇವಾ ಕನ್ನಡ ಸಾಹಿತ್ಯ ವೇದಿಕೆ ವತಿಯಿಂದ ಆರಿಕುಂಟೆ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಿನದಿಂದ ದಿನಕ್ಕೆ ನಮ್ಮಲ್ಲಿ ದೇಶ ಪ್ರೇಮ, ಸಂಸ್ಕೃತಿ ಮತ್ತಿತರೆ ಸಂಪ್ರದಾಯ ಆಚರಣೆಗಳಉ ನಶಿಸಿ ಹೋಗುತ್ತಿವೆ. ಈ ನಿಟ್ಟಿನಲ್ಲಿ ಸಾಹಿತ್ಯದ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು ಎಂದು ಅಭಿಮತ ವ್ಯಕ್ತಪಡಿಸಿದರು. ಸಮಾಜ ಸೇವಾ ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷ ಕೆ.ವಿ. ನಾಗರಾಜ್, ಪತ್ರಕರ್ತ ವೆಂಕಟೇಶ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಭೀಮರಾಮು ಕಾಂಬೆಳೆ  ನರಸಿಂಹ, ಶಿಕ್ಷಕ ಎನ್.ಶ್ರೀಧರ್, ಮುರಳೀಬಾಬು ಮತ್ತಿತರರು ಉಪಸ್ಥಿತರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.