ಕೋಲಾರ

ಎತ್ತಿನಹೊಳೆ ಯೋಜನೆಗಾಗಿ ಸರ್ಕಾರದ ಮೇಲೆ ಒತ್ತಡ: ಶಿವಶಂಕರರೆಡ್ಡಿ ಭರವಸೆ

Published On :

ಗೌರಿಬಿದನೂರು: ತಾಲೂಕಿನಲ್ಲಿ ಕಾಡುತ್ತಿರುವ ಜಲ ಸಮಸ್ಯೆ ನಿವಾರಿಸಲು ಎತ್ತಿಹೊಳೆ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ವಿಧಾನಸಭಾ ಡೆಪ್ಯೂಟಿ ಸ್ಪೀಕರ್ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ 67ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಡಾ. ಎನ್. ಭಾಸ್ಕರ್ ಮಾತನಾಡಿ, ನೂರು ವರ್ಷಗಳ ನಿರಂತರ ಹೋರಾಟದಿಂದಾಗಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತು. ಭಾರತದ ಸ್ವಾತಂತ್ರ್ಯ ಹೋರಾಟದ ಹಾದಿ ವಿಶ್ವದಲ್ಲೇ ವಿಭಿನ್ನವಾದುದು. ಇಂತಹ ವಿಭಿನ್ನವಾದ ಹೋರಾಟಕ್ಕೆ ನಾಯಕತ್ವ ನೀಡಿದವರು ಮಹಾತ್ಮ ಗಾಂಧಿಯವರು ಎಂದರು.
ಸಮಾರಂಭದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಕವಾಯಿತು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ತಾಪಂ ಅಧ್ಯಕ್ಷ ಎಚ್.ಎನ್.ನಿರಂಜನ, ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ತಾಪಂ ಇಒ ರೆಡ್ಡಪ್ಪ, ಕೃಷಿ ಸಹಾಯಕ ನಿರ್ದೇಶಕಿ ಅನುರೂಪ, ಬಿಇಓ ಜಗದೀಶ್ ಪುರಸಭಾ ಸಿಒ ಖಾಜಾ ಮೊಯಿನುದ್ದೀನ್, ಪುರ ಪೊಲೀಸ್ ಠಾಣೆಯ ಪಿಎಸ್ಐ ಸೂರ್ಯಪ್ರಕಾಶ್ ಮುಂತಾದವರು ಇದ್ದರು. ಪವನ್ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕುಕ್ಕರಗಾಲಿನಲ್ಲಿ ಕುಳಿತರು: ಬೆಳಗ್ಗೆ ಸುರಿದ ಮಳೆಯಿಂದಾಗಿ ಕಾರ್ಯಕ್ರಮದ ಸ್ಥಳವು ಕೆಸರುಮಯವಾಗಿತ್ತು. ಆದ್ದರಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಟ್ಟಣದ ಶಾಲಾ ಮಕ್ಕಳು ಕೆಸರುಮಯವಾಗಿದ್ದ ನೆಲದ ಮೇಲೆ ಕುಳಿತುಕೊಳ್ಳಲಾಗದೆ ಕುಕ್ಕರಗಾಲಿನಲ್ಲಿ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.