ರೈತ ಸದೃಢನಾದಾಗ ಮಾತ್ರ ದೇಶದ ಪ್ರಗತಿ
ಬಂಗಾರಪೇಟೆ: ಮೊದಲು ರೈತರು ಎಲ್ಲ ರೀತಿಯಲ್ಲಿಯೂ ಸದೃಢರಾದಾಗ ಮಾತ್ರ ದೇಶ ಪ್ರಗತಿ ಕಾಣಲು ಸಾಧ್ಯ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ಸಿಗುವ ನಾನಾ ರಿಯಾಯಿತಿ ಬಿತ್ತನೆ ಬೀಜಗಳು ಹಾಗೂ ಪರಿಕರಗಳನ್ನು ರೈತರಿಗೆ ವಿತರಿಸಿ, ಇಂದಿನ ಆಧುನಿಕತೆಯಲ್ಲಿ ಹಾಗೂ ಬರದಿಂದ ದೇಶದಲ್ಲಿ ಕೃಷಿ ಚಟುವಟಿಕೆಗಳು ದಿನೇ ದಿನೆ ನಶಿಸಿ ಹೋಗುತ್ತಿದೆ. ಕೃಷಿ ಉತ್ತೇಜಿಸಲು ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸುತ್ತಿದ್ದರೂ ಸರ್ಕಾರದ ನಿರೀಕ್ಷೆ ಮಟ್ಟ ತಲುಪುತ್ತಿಲ್ಲ. ಸರ್ಕಾರದಿಂದ ರೈತರಿಗೆ ಸಿಗುವ ಯೋಜನೆಗಳನ್ನು ಅಧಿಕಾರಿಗಳು ಹೋಬಳಿ ಮಟ್ಟದಿಂದ ಗ್ರಾಮ ಮಟ್ಟದವರೆಗೂ ವ್ಯಾಪಕ ಪ್ರಚಾರ ಮಾಡಬೇಕು ಎಂದರು.
ಬರಗಾಲದಲ್ಲಿ ರೈತರಿಗೆ ಅನುಕೂಲವಾಗಲೆಂದು ಹನಿ ನೀರಾವರಿಗೆ 90ರಷ್ಟು ಸಬ್ಸಿಡಿ ನೀಡಿದರೂ ಸಹ ರೈತರು ಇದರ ಉಪಯೋಗ ಪಡೆಯಲು ಮುಂದೆ ಬರುತ್ತಿಲ್ಲ. ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ಮಧ್ಯವರ್ತಿಗಳನ್ನು ಆಶ್ರಯಿಸದೆ ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಕೋರಿದರು.
ಇದೇ ವೇಳೆ ಶಾಸಕರು ಹಾವು ಕಡಿದು ಮೃತಪಟ್ಟ ಕುಟುಂಬಗಳಿಗೆ ಇಲಾಖೆಯಿಂದ ಸಿಗುವ ಒಂದು ಲಕ್ಷ ರು. ಚೆಕ್ ಅನ್ನು ಫಲಾನುಭವಿಗಳಿಗೆ ವಿತರಿಸಿದರು. ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಕನ್ನಡ ಸಂಘದ ಅಧ್ಯಕ್ಷ ಪಲ್ಲವಿಮಣಿ, ತಹಸೀಲ್ದಾರ್ ಉಷಾ, ತೋಟಗಾರಿಕೆ ಅಧಿಕಾರಿ ನಾರಾಯಣಸ್ವಾಮಿ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

