ಕಾಂಗ್ರೆಸ್ನಿಂದ ರಾಜೀವ್ ಗಾಂಧಿ, ಅರಸು ಜನ್ಮ ದಿನಾಚರಣೆ 20ರಂದು
ಕ.ಪ್ರ.ವಾರ್ತೆ, ಕೋಲಾರ, ಆ.17
ಮಾಜಿ ಪ್ರಧಾನ ಮಂತ್ರಿ ದಿವಂಗತ ರಾಜೀವ ಗಾಂಧಿ ಅವರ 70ನೇ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರ 98ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಮತ್ತು ಹಿಂದುಳಿದ ವರ್ಗ್ಗಗಳ ಸಂಯುಕ್ತ ಆಶ್ರಯದಲ್ಲಿ ಆ.20 ರಂದು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್. ಅನಿಲಕುಮಾರ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗ್ರಾ.ಪಂ.ಗಳನ್ನು ವಿಕೇಂದ್ರೀಕರಣಗೊಳಿಸಿ ಪಂಚಾಯಿಗಳಿಗೆ ಬಲ ನೀಡಿದಂತಹ ರಾಜೀವಗಾಂಧಿ ಮತ್ತು ಹಸಿರು ಕ್ರಾಂತಿಯ ಹರಿಕಾರ, ಭೂ ಸುಧಾರಣೆ ಜಾರಿಗೆ ತಂದ ದೇವರಾಜ್ ಅರಸು ಅವರು ಅನುಷ್ಟಾನಕ್ಕೆ ತಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಹಿಂದುಳಿದ ವರ್ಗಗಳ ಸಮಿತಿಯು ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲೂಕು ಮಟ್ಟದಲ್ಲೂ ಇವರಿಬ್ಬರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ತಯಾರಿ ನಡೆಸಿದೆ ಎಂದರು.
ರಾಜೀವಗಾಂಧಿ ಮತ್ತು ಅರಸು ಅವರ ಜನ್ಮ ದಿನಾಚರಣೆ ಈ ಮೊದಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾತ್ರ ನಡೆಸಲಾಗುತ್ತಿತ್ತು. ಈಗ ಜನರ ಮಧ್ಯೆ ಆಚರಿಸಿ ಯುವ ಜನತೆಗೆ ಈ ಇಬ್ಬರು ಮಹನೀಯರ ಆದರ್ಶಗಳನ್ನು ಹಾಗೂ ಕಾರ್ಯಕ್ರಮಗಳನ್ನು ಪರಿಚಯಿಸುವುದು ಜನ್ಮ ದಿನಾಚರಣೆ ಆಶಯ ಎಂದು ಹೇಳಿದರು.
ಆ.20ರಂದು ಬೆಳಗ್ಗೆ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದಕ್ಕೆ ನಮ್ಮ ಪಕ್ಷದ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಮಾತನಾಡಿ, ಆ.20ರಂದು ನಗರದ ಅಂತರಗಂಗೆ ಬುದ್ಧಿಮಾದ್ಯ ಶಾಲೆ, ಬಂಗಾರಪೇಟೆ ರಸ್ತೆಯಲ್ಲಿರುವ ಹಂಚಾಳ ಗೇಟ್ನ ನಿರ್ಗತಿಕರ ಪುನರ್ವಸತಿ ಕೇಂದ್ರ, ಹೊನ್ನೇನಹಳ್ಳಿಯಲ್ಲಿರುವ ಅನಾಥ ಶ್ರಮ ಮತ್ತು ಚಿಕ್ಕಅಯ್ಯೂರಿನ ಗುರುಕುಲ ಅನಾಥಾಶ್ರಮದ ಮಕ್ಕಳಿಗೆ ಹೊದಿಕೆ ಮತ್ತು ಸಿಹಿಯನ್ನು ಹಂಚಲಾಗುವುದು ಎಂದು ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

