ಕೋಲಾರ

ದ್ವಿ ಚಕ್ರವಾಹನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಒಬ್ಬ ವಿದ್ಯಾರ್ಥಿ ಸಾವು

Published On :

ಚಿಕ್ಕಬಳ್ಳಾಪುರ: ಕಾಲೇಜು ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತೊರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕಣಿವೆ ಪ್ರದೇಶದಲ್ಲಿ ಶನಿವಾರ ನಡೆದಿದೆ. ಮೃತರನ್ನು ಶಾಂತಿನಿಕೇತನ್ ಶಾಲೆಯ ದ್ವಿತೀಯ ಪಿಯುಸಿ ಪಿಸಿಎಂಬಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್(17) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಶ್ರೀಕಾಂತ್ ತಂದೆ ಗೋಪಿನಾಥ್ ನಗರದ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದು, ಶನಿವಾರ ಕಾಲೇಜು ಮುಗಿಸಿ ಶ್ರೀಕಾಂತ್ ದ್ವಿಚಕ್ರ ವಾಹನದಲ್ಲಿ  ಪವನ್, ಮಂಜುನಾಥ್ ಅವರೊಂದಿಗೆ ಕಣಿವೆ ಪ್ರದೇಶದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ದ್ವಿಚಕ್ರ ವಾಹನದ ಕೊನೆಯಲ್ಲಿ ಕುಳಿತ್ತಿದ್ದ ಶ್ರೀಕಾಂತ್ ತಲೆ ಮರಕ್ಕೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧ್ಯದಲ್ಲಿ ಕುಳಿತಿದ್ದ ಪವನ್ ಎಂಬ ವಿದ್ಯಾರ್ಥಿಗೆ ಕೈಕಾಲು ಮುರಿದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಲಾಯಿಸುತ್ತಿದ್ದ ಮಂಜುನಾಥ್ ಅದೃಷ್ಟವಶಾತ್ ಯಾವುದೇ ಹಾನಿಯಾಗದೆ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ.
ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.