ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ತಂದೆ ಸಾವು, ಮಗನಿಗೆ ತೀವ್ರ ಗಾಯ
ಬಾಗೇಪಲ್ಲಿ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಸಮೀಪದಲ್ಲಿರುವ ಎನ್.ಹೆಚ್.7ರ ಗ್ರೀನ್ಪಾರ್ಕ್ ಬಳಿ ನಡೆದಿದೆ.
ನರಸಿಂಹಪ್ಪ(45) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ದೈವಿ. ಮೃತನ ಮಗನಾದ ಮಂಜುನಾಥ(20)ಗಾಯಗೊಂಡು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕ್ಸಿತೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಮೃತ ನರಸಿಂಹಪ್ಪ ಮತ್ತು ಅವರ ಮಗ ಮಂಜುನಾಥ್ ಎಂಬುವವರು ಗುಡಿಬಂಡೆ ತಾಲ್ಲೂಕಿನ ಅಂಭಾಪುರ ಗ್ರಾಮದ ನಿವಾಸಿಗಳಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಸುಂಕಲಮ್ಮ ದೇವರ ದರ್ಶನ ಪಡೆದು ತಂದೆಗೆ ಆರೋಗ್ಯ ಸರಿಯಿಲ್ಲದ ಕಾರಣ ಮಾತ್ರೆ ಖರೀದಿ ಮಾಡಲು ಬಾಗೇಪಲ್ಲಿ ಪಟ್ಟಣಕ್ಕೆ ಬಂದು ಇಲ್ಲಿಂದ ತಮ್ಮ ಸ್ವಗ್ರಾಮಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ಮದರಸ ಮುಂದೆಯಿಂದ ಎಲ್ಲೋಡು ಕಡೆಗೆ ಹೋಗುವಾಗ ಹೈದರಾಬಾದ್ ಕಡೆಯಿಂದ ಅತಿ ವೇಗವಾಗಿ ಬಂದ ಇನೋವಾ ಕಾರು ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ.
ಈ ಸ್ಥಳದಲ್ಲಿ ಪದೇ ಪದೇ ಅಪಘಾತಗಳಾಗುತ್ತಿರುವುದರಿಂದ ಅಮಾಯಕ ಜನರು ಬಲಿಯಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಅಂಡರ್ಪಾಸ್ ನಿರ್ಮಾಣ ಮಾಡಿ ಅಪಘಾತಗಳು ಸಂಭವಿಸದಂತೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

