ಪಿಡಚಲಹಳ್ಳಿ: ಮಕ್ಕಳಿಗೆ ಸಮವಸ್ತ್ರ, ಬ್ಯಾಗ್, ಕಲಿಕಾ ಸಾಮಗ್ರಿ ವಿತರಣೆ
ಕ.ಪ್ರ.ವಾರ್ತೆ , ಗೌರಿಬಿದನೂರು , ಆ. 18
ಹೋಬಳಿ ವ್ಯಾಪ್ತಿಯ ಪಿಡಚಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯೋತ್ಸವ ಅಂಗವಾಗಿ ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಬ್ಯಾಗ್ ಹಾಗೂ ಕಲಿಕೋಪಕರಣಗಳನ್ನು ವಿತರಿಸಲಾಯಿತು.
ಮುಖಂಡ ಪಿ.ಎನ್. ಪ್ರಕಾಶ್ ಮಾತನಾಡಿ ಮುಖ್ಯವಾಗಿ ಹಳ್ಳಿಗಳಲ್ಲಿ ಬಡ ಕುಟುಂಬಗಳ ಮಕ್ಕಳು ಶಾಲೆಗೆ ಬರಲು ಸಹಾಯಹಸ್ತ, ಪ್ರೋತ್ಸಾಹ ಬೇಕು ಎಂದ ಅವರು ಹಳ್ಳಿ ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ನಿರಂತರವಾಗಿ 8 ವರ್ಷಗಳಿಂದ ತಾವು ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಕಲಿಕೋಪಕರಣಗಳನ್ನು ಮಕ್ಕಳಿಗೆ ನೀಡುತ್ತಿರುವುದಾಗಿ ತಿಳಿಸಿದರು. ಗೌರಿಬಿದನೂರು ಪಿಎಸ್‌ಐ ಯಶವಂತ್ ಸಮವಸ್ತ್ರ ನೀಡಿದರು.
ಪಿ.ಜಿ.ರಾಮರೆಡ್ಡಿ, ಕೆ.ರವಿ, ವೆಂಕಟೇಶ್, ಮುಖ್ಯೋಪಾಧ್ಯಾಯ ಚಿಕ್ಕನಾರಾಯಣಪ್ಪ, ಚನ್ನಪ್ಪ ಹಾಗೂ ಪಿ.ಎನ್. ಮುನಿಕೃಷ್ಣೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

