ಕೋಲಾರ

ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Published On :

ಕೋಲಾರ: ತಾಲೂಕಿನ ನರಸಾಪುರ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ಉದ್ಯಮಿ ಹಾಗೂ ಸಮಾಜ ಸೇವಕರಾದ ಸಿಲ್ವಿಯನ್ ನರ್ಹೋನಾ ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ, ಲೇಖನ ಸಾಮಗ್ರಿ ಹಾಗೂ ಇನ್ನಿತರ ವಸ್ತುಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮ ಮುಖಂಡರಾದ ಪಿ.ಪ್ರಾಣೇಶ್ ರಾವ್ ನರಸಾಪುರದ ಭಾನುಪ್ರಕಾಶ್, ಚಾಮುಂಡಿ ಗ್ರಾನೈಟ್ಸ್‌ನ ಚಂದ್ರು ಅವರು ನೋಟ್‌ಪುಸ್ತಕಗಳನ್ನು ಹಾಗೂ ಲೇಖನ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಚಾಕರಸನಹಳ್ಳಿಯ ಸಿ.ಮಂಜುನಾಥ್ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ರೇಣುಕಾ ಪ್ರಸಾದ್, ದೇಶಭಕ್ತಿ ಮೈಗೂಡಿಸಿಕೊಳ್ಳುವುದರ ಜೊತೆಗೆ ನ್ಯಾಯ ಮತ್ತು ಶಾಂತಿಯುತ ಜೀವನವನ್ನು ನಡೆಸುವ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ರೋಟರಿ ಸಂಸ್ಥೆಯ ಅಧ್ಯಕ್ಷ ಆಂಥೋನಿ.ಎಸ್. ಕ್ರೂಜ್ ವಹಿಸಿದ್ದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದೇವರಾಜ್, ಮುಖ್ಯ ಶಿಕ್ಷಕ ಎ.ಆನಂದ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶಪ್ಪ, ಜಯಮ್ಮ, ಮುಖಂಡರಾದ ಕೆ.ಎಂ. ಮುನಿರಾಜು, ರಾಮಕೃಷ್ಣಪ್ಪ ಇದ್ದರು.
ಕೋಲಾರದ ಬಿಆರ್‌ಸಿಯ ಬಿಆರ್‌ಪಿಗಳಾದ ಕೆ. ಶ್ರೀನಿವಾಸ್ ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕ ಚಂದ್ರು ಸ್ವಾಗತಿಸಿ, ಎಸ್.ರಮೇಶ್ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ನೇತೃತ್ವವನ್ನು ಶಿಕ್ಷಕರಾದ ಸಂಧ್ಯಾರಾಣಿ, ಸೌಮ್ಯ, ಶಿಲ್ಪ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.