ಬಿಪಿಎಲ್ ಕಾರ್ಡ್ದಾರರಿಗೆ ಆಗುತ್ತಿರುವ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ , ಕೆಜಿಎಫ್ , ಆ. 19
ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್ದಾರರಿಗೆ ಆಗುತ್ತಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಸಂಘ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಆಹಾರ ಹಾಗೂ ನಾಗರಿಕ ಪೂರೈಕ ಸಚಿವ ದಿನೇಶ್ ಗುಂಡುರಾವ್ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು ಕೆಜಿಎಫ್ ಕ್ಷೇತ್ರದಲ್ಲಿ ಬಡ ಕುಟುಂಬಗಳು ಹಾಗೂ ಸಾರ್ವಜನಿಕರಿಗೆ ಆಹಾರ ಇಲಾಖೆಯಿಂದ ಪ್ರತಿನಿತ್ಯ ಒಂದಲ್ಲಾ ಒಂದು ಸಮಸ್ಯೆಗಳಾಗುತ್ತಿವೆ. ಆದರೂ ಸಂಬಂಧಪಟ್ಟ ಅಧಿಕಾರಿಗಳಾಗಲಿ ಅಥವಾ ಕ್ಷೇತ್ರದ ಪ್ರತಿನಿಧಿಗಳಾಗಲಿ ಇತ್ತ ಗಮನ ಹರಿಸುತ್ತಿಲ್ಲ. ನಾಗರಿಕರಿಗೆ ಇಲಾಖೆಯಿಂದ ಸರಿಯಾದ ಮಾಹಿತಿ ಮತ್ತು ವಿವರಣೆ ನೀಡುತ್ತಿಲ್ಲ. ವಿವಿಧ ಸಮಸ್ಯೆಗಳನ್ನು ಮುಂದಿಟ್ಟು ಇಲಾಖೆ ಹಾಗೂ ನ್ಯಾಯಬೆಲೆ ಅಂಗಡಿಗಳು ಜನರಿಂದ 200-300 ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದರು.
ಸೀಮೆಎಣ್ಣೆ ವಿತರಿಸುತ್ತಿಲ್ಲ: ಇದೇ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ. ಚಂದರ್ ಫಲಾನುಭವಿಗಳಿಗೆ ಅಗತ್ಯ ಸೀಮೆಎಣ್ಣೆಯೂ ವಿತರಣೆ ಆಗುವಲ್ಲಿ ಸಮಸ್ಯೆಗಳು ಎದುರಾಗುತ್ತಿವೆ. ಸೀಮೆಎಣ್ಣೆಯನ್ನೇ ನಂಬಿರುವ ಬಡಕುಟುಂಬಗಳಿಗೆ ಇದರಿಂದ ಅಪಾರ ತೊಂದರೆಯಾಗುತ್ತಿದೆ. ಪ್ರತಿ ತಿಂಗಳೂ ರೇಷನ್ ಜೊತೆಗೆ ಸೋಪ್, ಉಪ್ಪು, ಬೇಳೆ ಮುಂತಾದ ಸಾಮಾಗ್ರಿಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ನ್ಯಾಯಬೆಲೆ ಮಾಲೀಕರು ಒತ್ತಾಯಿಸುತ್ತಿದ್ದಾರೆ. ಅವುಗಳನ್ನು ಕೊಳ್ಳಲು ನಿರಾಕರಿಸಿದರೆ, ರೇಷನ್ ಹಾಕುವುದಿಲ್ಲ ಎಂದು ಬೆದರಿಕೆ ಹಾಕುತ್ತಾರೆ. ಇದರಿಂದ ಬಡ ಕುಟುಂಬಗಳಿಗೆ ತೀವ್ರ ತೊಂದೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಜರುಗಿಸಬೇಕೆಂದರು.
ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ಸರಿಯಾಗಿ ವಿತರಿಸುತ್ತಿಲ್ಲ. ತಿಂಗಳಲ್ಲಿ ಕೇವಲ 3 ದಿನಗಳು ಮಾತ್ರ ಈ ಅಂಗಡಿಗಳು ತೆರೆದಿರುತ್ತವೆ. ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲು ತಾರತಮ್ಯ ತೋರುತ್ತಿದ್ದಾರೆ. ಅಲ್ಲದೇ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು. ಎಪಿಎಲ್ ಪಡಿತರದಾರರಿಗೂ ಎಲ್ಲ ಆಹಾರ ಸಾಮಾಗ್ರಿಗಳನ್ನು ವಿತರಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾನಿರತರು ಸರ್ಕಾರವನ್ನು ಎಚ್ಚರಿಸಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ದಾಸೇಗೌಡ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘದ ಕಾರ್ಯಕರ್ತರಾದ ನಜೀರ್ ಅಹ್ಮದ್, ಅರುಣಾಚಲಂ, ಎಸ್.ಕುಮಾರ್. ಯಶ್ವಂತ್, ಶಂಶುದ್ದೀನ್, ಇರ್ಫನ್ಪಾಷಾ, ಪ್ರಭು, ಇಳಂಗೋವನ್, ಬಾಬು, ರವಿ, ಆಸಿಫ್, ಜಮೀರ್ಅಹ್ಮದ್, ನರೇಂದ್ರ, ಜೋಸೆಫ್ವಿಲಿಯಂ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

