ವಾರ್ತಾ ಇಲಾಖೆ ಮೂಲಕವೇ ಜಾಹಿರಾತು ನೀಡಿ: ಡಿಸಿಗೆ ಮನವಿ
ಕೋಲಾರ: ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ ಮಂಡಳಿ, ಸ್ಥಳೀಯ ಸಂಸ್ಥೆಗಳು ವಾರ್ತಾ ಇಲಾಖೆ ಮೂಲಕವೇ ಜಾಹಿರಾತುಗಳನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಮತ್ತು ವಾರ್ತಾ ಸಚಿವರಿಗೆ ಮನವಿ ಕಳುಹಿಸಲಾಯಿತು.
ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಜಿಲ್ಲಾ ಪತ್ರಿಕೆಗಳ ಸಂಪಾದಕರು, ರಾಜ್ಯ, ಜಿಲ್ಲಾ ಪತ್ರಿಕೆಗಳ ವರದಿಗಾರರು ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಹಿಂದೆ ಹಿರಿಯ ಪತ್ರಕರ್ತರು ಹಾಗೂ ವಿಧಾನ ಪರಿಷತ್ನ ಸದಸ್ಯರಾದ ಪಿ.ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ಕಾರವೇ ರಚಿಸಿದ್ದ ಸಲಹಾ ಸಮಿತಿ ಹಾಗೂ ಮಾಜಿ ಸಚಿವರಾದ ಮೊಹಿದ್ದೀನ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಸಲಹಾ ಸಮಿತಿ ಸರ್ಕಾರದ ಜಾಹಿರಾತು ಪ್ರಕಟಣಾ ವ್ಯವಸ್ಥೆಯಲ್ಲಿ ಕೇಂದ್ರಿಕೃತ ವ್ಯವಸ್ಥೆ ಅತಿ ಅವಶ್ಯ ಹಾಗೂ ಸೂಕ್ತವಾಗಿದ್ದು ಎಂದು ತಿಳಿಸಿತ್ತು ಆದರೆ, ಈಗ ಖಾಸಗಿ ಸಂಸ್ಥೆಯ ಮೂಲಕ ಜಾಹಿರಾತು ನೀಡುವುದರಿಂದ ಪತ್ರಿಕೆಗಳಿಗೆ ನಷ್ಟವಾಗುತ್ತದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ತಿಳಿಸಿದರು.
ಪತ್ರಕರ್ತರ ಸಂಘದಿಂದ ಮನವಿಯನ್ನು ಲೋಕೋಪಯೋಗಿ ಇಲಾಖೆ ಇಇ ಮುನಿಆಂಜಿನಪ್ಪ, ಜಿಪಂ ಇಇ ದೇವರಾಜ್, ವಾರ್ತಾಧಿಕಾರಿ ಸಿ.ಎಂ. ರಂಗಾರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ವಾಸದೇವಹೊಳ್ಳ, ಕೆ.ಎಸ್. ಗಣೇಶ್, ಮುನಿರಾಜು ಹಾಗೂ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

