ಕೋಲಾರ

ರಕ್ತದಾನ ಮೂಲಕ ರಾಜೀವ್ ಜನ್ಮದಿನ

Published On :

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ 69ನೇ ಹುಟ್ಟುಹಬ್ಬ ಅಂಗವಾಗಿ ಯುವ ಕಾಂಗ್ರೆಸ್ ಮತ್ತು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಸ್ವಯಂ ರಕ್ತದಾನ ಮಾಡುವ ಮೂಲಕ ಶಾಸಕ ಡಾ.ಕೆ. ಸುಧಾಕರ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಕ್ತದಾನ ಮಹತ್ತರವಾದುದು. ಇದರಿಂದ ಅನೇಕರ ಜೀವ ಉಳಿಸಬಹುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಯಂ ಪ್ರೇರಣೆಯಿಂದ ಹೆಚ್ಚಿಗೆ ರಕ್ತದಾನ ಮಾಡಬೇಕು. ಹಾಗೆಯೇ ಹೆಚ್ಚಿಗೆ ರಕ್ತದಾನ ಶಿಬಿರಗಳು ನಡೆಯಬೇಕೆಂದು ಸಲಹೆ ನೀಡಿದರು.
ತಮ್ಮ ಮಹತ್ತರವಾದ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಅಭಿವೃದ್ಧಿಗೆ ಶ್ರಮಿಸಿದರು. ಇವರ 69ನೇ ಹುಟ್ಟುಹಬ್ಬ ಅಂಗವಾಗಿ ಯುವ ಕಾಂಗ್ರೆಸ್ ಮುಖಂಡರು, ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ತುಂಬಾ ಒಳ್ಳೆಯದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಶಾಸಕ ಡಾ.ಕೆ. ಸುಧಾಕರ್ ಸೇರಿದಂತೆ ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ಸಿ.ಜೆ.ರಾಯಪ್ಪ, ನಗರಸಭಾ ಸದಸ್ಯ ಗಜೇಂದ್ರ, ಯುವ ಕಾಂಗ್ರೆಸ್ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.