ಪೊಲೀಸರೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಎಸ್ಪಿ ಡಾ.ರೋಹಿಣಿ ಕರೆ
ಕ.ಪ್ರ.ವಾರ್ತೆ , ಕೆಜಿಎಫ್ , ಆ.19
ನಗರದಲ್ಲಿ ನಡೆಯುವ ವಿವಿಧ ರೀತಿಯ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯವನ್ನು ಬೆಳೆಸಿಕೊಳ್ಳಬೇಕೆಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸೆಪಟ್ ತಿಳಿಸಿದರು.
ನಗರದ ಶ್ರೀ ಭಗವಾನ್ ಮಹಾವೀರ್ ಜೈನ್ ಕಾಲೇಜಿನ ಆವರಣದಲ್ಲಿ ಜೈನ್ ಯುವಕ್ ಮಂಡಲ್ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕ ಸೇವೆಯಲ್ಲಿ ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಿಸುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ತಮ್ಮ ಕಣ್ಣ ಮುಂದೆ ನಡೆಯುವ ಘಟನೆಗಳು ಮತ್ತು ಅಪರಾಧಗಳ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಸ್ಥಳೀಯ ಠಾಣೆಗೆ ವಿಷಯ ತಿಳಿಸಿದರೆ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬಹುದು ಎಂದರು.
ಅದೇ ರೀತಿ ಜೈನ್ ಸಮುದಾಯದ ಹಿರಿಯ ಮುಖಂಡರಾದ ಮಂಗಲ್ಚಂದ್ ಬನ್ಟಯಾ ಹಾಗೂ ಹೇಮರಾಜ್ ತಾಡೇಯ ಮಾತನಾಡಿ ಜೈನ್ ಯುವಕ ಮಂಡಲ್ ಸಮಿತಿ ಕಳೆದ 50 ವರ್ಷಗಳಿಂದ ಕ್ಷೇತ್ರದಲ್ಲಿ ಹಲವಾರು ಜನಪರ ಕಾರ್ಯಕ್ರಮಗಳು, ಉಚಿತ ಆರೋಗ್ಯ ಶಿಬಿರಗಳು, ಅಂಗವಿಕಲರಿಗೆ ವಿವಿಧ ರೀತಿಯ ಸೌಲಭ್ಯಗಳು, ನೆರೆ ಸಂತ್ರಸ್ತರಿಗೆ ಆರ್ಥಿಕ ನೆರವು ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವುದು ಸಂತಸದ ವಿಷಯ ಎಂದರು.
ಜೈನ್ ಯುವಕ್ ಮಂಡಲ್ ಸಮಿತಿಯ ನೂತನ ಅಧ್ಯಕ್ಷ ಸುನಿಲ್ ಬನಟಯಾ ಜೈನ್, ಉಪಾಧ್ಯಕ್ಷ ಮನೋಜ್ ಮುನೋತ್ ಜೈನ್, ಪ್ರಧಾನ ಕಾರ್ಯದರ್ಶಿ ಸುನಿಲ್ ತಲೇಡ ಜೈನ್, ಜಂಟಿ ಕಾರ್ಯದರ್ಶಿ ಮಾನಿಷ್ಸೆಟ್ ಜೈನ್, ಖಜಾಂಚಿ ಸುನೀಲ್ ಪಗಾರಿಯಾ ಜೈನ್, ಸದಸ್ಯರಾದ ಸಂದೀಪ್ ಡಾಗ ಜೈನ್, ಕಮಲ್ ಚಲ್ಲಾನಿ ಜೈನ್, ಮಹೇಂದ್ರ ಮನೋತ್ ಜೈನ್ ಇತರೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

